Saturday, May 24, 2025
Homeರಾಜ್ಯಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿ ಆಸ್ಪತ್ರೆಗೆ ದಾಖಲು

ಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿ ಅಸ್ವಸ್ಥನಾಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಮಲ್ಟಿಸ್ಪೆಶಾಲಿಟಿ ಘಟಕಕ್ಕೆ ರವಿ ಪೂಜಾರಿಯನ್ನು ದಾಖಲಿಸಲಾಗಿದೆ. ಹರ್ನಿಯಾ ಶಸ್ತ್ರ ಚಿಕಿತ್ಸೆಯ ಹಿನ್ನೆಲೆಯಲ್ಲಿ ರವಿ ಪೂಜಾರಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೆನೆಗಲ್‌ನಲ್ಲಿ ಬಂಧಿಸಲ್ಪಟ್ಟಿದ್ದ ರವಿ ಪೂಜಾರಿ, ವಿಚಾರಣೆ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ.

RELATED ARTICLES
- Advertisment -
Google search engine

Most Popular