ಮಂಗಳೂರಿನಲ್ಲಿ ಗಾಂಜಾ ಜಾಲ ಬಯಲು : ಐದು ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ

0
7

ಮಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಇತರರಿಗೆ ಗಾಂಜಾ ಪೂರೈಸುತ್ತಿದ್ದ ಐದು ವಿದ್ಯಾರ್ಥಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮಂಗಳೂರಿನ ವಿಭಿನ್ನ ಕಾಲೇಜುಗಳಲ್ಲಿ ಓದುತ್ತಿದ್ದು, ಒಂದೇ ಕೊಠಡಿಯಲ್ಲಿ ವಾಸಿಸುತ್ತಿದ್ದರು.

ಅವರು ಬೇರೆ ಪ್ರದೇಶಗಳಿಂದ ಗಾಂಜಾವನ್ನು ತರಿಸಿಕೊಂಡು, ತಮ್ಮ ಕೊಠಡಿಯಲ್ಲಿ ಸಣ್ಣ ಸಣ್ಣ ಪ್ಯಾಕೆಟ್‌ಗಳಲ್ಲಿ ತುಂಬಿಸಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಇತರರಿಗೆ ಮಾರಾಟ ಮಾಡುತ್ತಿದ್ದರು.

ಪೊಲೀಸರು ಅವರ ಗ್ರಾಹಕರ ಪಟ್ಟಿಯನ್ನು ಪರಿಶೀಲಿಸಿದಾಗ, ಆರು ಕಾಲೇಜುಗಳ ಸುಮಾರು 40 ವಿದ್ಯಾರ್ಥಿಗಳು ಮತ್ತು ಇನ್ನೂ 10 ಮಂದಿ ಈ ವಲಯಕ್ಕೆ ಸಂಬಂಧಿಸಿದ್ದಾಗಿ ಪತ್ತೆಯಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ತಿಳಿಸಿದ್ದಾರೆ.

ಕಾಲೇಜಿಗೆ ಹೋಗುತ್ತಿದ್ದ ಮಗನ ಬಳಿ ಗಾಂಜಾ ಪ್ಯಾಕೆಟ್ ಸಿಕ್ಕಿರುವುದಾಗಿ ಒಬ್ಬ ವಿದ್ಯಾರ್ಥಿಯ ಪೋಷಕರು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದಾಗ, ಈ ಐದು ಮಂದಿ ವಿದ್ಯಾರ್ಥಿಗಳ ಗಾಂಜಾ ಮಾರಾಟ ಜಾಲ ಬೆಳಕಿಗೆ ಬಂದಿದೆ.

LEAVE A REPLY

Please enter your comment!
Please enter your name here