ಅಂಕೋಲ: ಮಳೆಯಿಂದಾಗಿ ಅಂಕೋಲಾದ ಶಿರೂರು ಬಳಿ ಗುಡ್ಡ ಕುಸಿದಿದ್ದು, ಕುಸಿತದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ವೊಂದು ಪಕ್ಕದ ನದಿಗೆ ಎಸೆಯಲ್ಪಟ್ಟಿದೆ.
ಹೆದ್ದಾರಿ ಬದಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್ ನದಿಗೆ ಉರುಳಿದೆ. ನದಿಯಲ್ಲಿ ತೇಲುತ್ತಿದ್ದ ದೃಶ್ಯ ಕಂಡುಬಂದಿದೆ.
ಶಿರೂರಿನ ಬೊಮ್ಮಯ್ಯ ದೇವಸ್ಥಾನದ ಬಳಿ ಗುಡ್ಡ ಕುಸಿದಿದೆ. ಗುಡ್ಡ ಕುಸಿತದ ಪರಿಣಾಮ ಟೀ ಸ್ಟಾಲ್ ಸೇರಿ ಹಲವು ಅಂಗಡಿಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ ಒಂದೇ ಕುಟುಂಬದ ಐವರು ಸೇರಿ ಹಲವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂದಿ, ಆಂಬುಲೆನ್ಸ್ ಸ್ಥಳಕ್ಕೆ ಧಾವಿಸಿ, ನಾಪತ್ತೆಯಾದವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ.
