Tuesday, March 18, 2025
Homeಅಪಘಾತಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ, ವಾಹನ ಸಂಚಾರ ಸ್ಥಗಿತ

ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿ, ವಾಹನ ಸಂಚಾರ ಸ್ಥಗಿತ

ಶಿರಾಡಿ ಘಾಟ್‌ನಲ್ಲಿ ಗ್ಯಾಸ್‌ ಟ್ಯಾಂಕರೊಂದು ಪಲ್ಟಿಯಾಗಿ ಬಿದ್ದಿರುವ ಪರಿಣಾಮ ಗ್ಯಾಸ್‌ ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕ ಸೃಷ್ಟಿಯಾಗಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್‌ ಟ್ಯಾಂಕರ್‌ ಪಲ್ಟಿಯಾಗಿ ಬಿದ್ದಿದ್ದು, ಅದರಲ್ಲಿ ಗ್ಯಾಸ್‌ ಸೋರಿಕೆಯಾಗುತ್ತಿದೆ. ಈ ಕಾರಣದಿಂದ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರ ನಿಲ್ಲಿಸಲಾಗಿದೆ. ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪೊಲೀಸರು ವಾಹನಗಳನ್ನು ಬದಲಿ ಮಾರ್ಗದಲ್ಲಿ ತೆರಳುವಂತೆ ಸೂಚಿಸುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular