
ಬಂದಾರು: ಬೆಳ್ತಂಗಡಿ ತಾಲೂಕು ಮಟ್ಟದ ‘ಗೌಡೆರೆ ಗೌಜಿ ಗಮ್ಮತ್ 2026’ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ.) ಹಳೇಕೋಟೆ, ಬೆಳ್ತಂಗಡಿ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ (ಲಿ.) ಬೆಳ್ತಂಗಡಿ ಹಾಗೂ ಸ್ಪಂದನಾ ಸೇವಾ ಸಂಘ, ಬೆಳ್ತಂಗಡಿ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆಯ ನೇತೃತ್ವದಲ್ಲಿ ಈ ತಾಲೂಕು ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿತ್ತು.
ವಾಲಿಬಾಲ್ ಪಂದ್ಯಾಟದಲ್ಲಿ ಉತ್ತಮ ಆಟದ ಪ್ರದರ್ಶನ ನೀಡಿದ ಬಂದಾರು ಗ್ರಾಮದ ಮೈರೋಳ್ತಡ್ಕ ತಂಡ ಎದುರಾಳಿ ತಂಡಗಳನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ತನ್ನದಾಗಿಸಿಕೊಂಡಿತು. ಈ ಸಾಧನೆಯೊಂದಿಗೆ ತಂಡ ಶಾಶ್ವತ ಫಲಕ ಹಾಗೂ ನಗದು ಬಹುಮಾನವನ್ನು ಪಡೆದುಕೊಂಡಿದೆ.
ತಂಡದ ಈ ಸಾಧನೆಗೆ ಗ್ರಾಮಸ್ಥರು ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ವ್ಯಕ್ತಪಡಿಸಿದ್ದಾರೆ.
