ದಾವಣಗೆರೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಯಕ್ಷರಂಗ ಯಕ್ಷಗಾನ ಸಂಸ್ಥೆಯ 2025-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ಮೇ 24 ರಂದು ಶನಿವಾರ ಸಂಜೆ 5.00ಕ್ಕೆ ಕಲಾಕುಂಚ ಕಛೇರಿ ಸಭಾಂಗಣದಲ್ಲಿ ಸರ್ವ ಸದಸ್ಯರ ಮಹಾಸಭೆ ಕರೆಯಲಾಗಿದೆ ಎಂದು ಯಕ್ಷರಂಗದ ಪ್ರಧಾನ ಕಾರ್ಯದರ್ಶಿ ಬೇಳೂರು ಸಂತೋಷ್‌ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಯಕ್ಷರಂಗದ ಅಧ್ಯಕ್ಷರಾದ ಮಲ್ಯಾಡಿ ಪ್ರಭಾಕರ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಮಹತ್ವಪೂರ್ಣ ಸಭೆಯಲ್ಲಿ ವಾರ್ಷಿಕ ವರದಿ ಮಂಡನೆ, ವಾರ್ಷಿಕ ಲೆಕ್ಕಪತ್ರ ಮಂಡನೆ, ಅನುಮೋದನೆ ಮುಂದಿನ ಯಕ್ಷಗಾನ ಕಾರ್ಯಕ್ರಮ ಉಚಿತ ತರಬೇತಿ ಕುರಿತು ವಿಚಾರ ವಿನಿಮಯ ನಡೆಯಲಿದ್ದು ಯಕ್ಷಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಮಹಾಸಭೆಯ ಯಶಸ್ವಿಗೊಳಿಸಬೇಕಾಗಿ ಯಕ್ಷರಂಗದ ಖಜಾಂಚಿ ನೀಲಾವರ ಭಾಸ್ಕರನಾಯಕ್ ವಿನಂತಿಸಿದ್ದಾರೆ.
ಮೇ 24 ರಂದು ಯಕ್ಷರಂಗದ ಸರ್ವ ಸದಸ್ಯರ ಮಹಾಸಭೆ
RELATED ARTICLES