ಮುಲ್ಕಿ: ಇಲ್ಲಿಗೆ ಸಮೀಪದ ಕಾರ್ನಾಡ್ ರುಕ್ಮಯಬೆಟ್ಟು ನಿವಾಸಿ ಗಿರಿಜಾ ಡಿ ಸುವರ್ಣ (90) ರವರು ಸ್ವಗೃಹದಲ್ಲಿ ಬುಧವಾರ ನಿಧನರಾದರು.
ಅವರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರು , ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ
ಪ್ರತಿಷ್ಠಿತ ಮನೆತನದಲ್ಲಿ ಜನಿಸಿ ಕೃಷಿಕೆಯಾಗಿ, ಹೈನುಗಾರರಾಗಿ ದಾನ ಧರ್ಮಗಳ ಮೂಲಕ ಆದರ್ಶ ಬದುಕಿನಿಂದ ಯುವ ಜನಾಂಗಕ್ಕೆ ಮಾದರಿಯಾಗಿದ್ದರು, ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ, ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬರ್ನಾಡ್, ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್, ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಸುಭಾಷ್ ಶೆಟ್ಟಿ, ಸದಸ್ಯರಾದ ಹರ್ಷರಾಜ ಶೆಟ್ಟಿ, ಪುತ್ತು ಬಾವ, ಡಾ.ಹರಿಶ್ಚಂದ್ರ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು,ಲಯನ್ಸ್ ಕ್ಲಬ್ ಬಪನಾಡು ಇನ್ಸ್ಪೈರ್ ನ ವೆಂಕಟೇಶ ಹೆಬ್ಬಾರ್,ಉದ್ಯಮಿ ಜಾನ್ ಕ್ವಾಡ್ರಾಸ್, ಮುಲ್ಕಿ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಗೋಪಿನಾಥ ಪಡಂಗ, ಉಮೇಶ್ ಮಾನಂಪಾಡಿ,ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ರೋಲ್ಫಿ ಡಿಕೋಸ್ಟ, ಸಾಮಾಜಿಕ ಕಾರ್ಯಕರ್ತ ಶಂಕರ್ ಪಡಂಗ, ಧರ್ಮಾನಂದ ಶೆಟ್ಟಿಗಾರ್, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.