ಮಂಗಳೂರು : ಪ್ರಚಲಿತ ಚಾರಿಟೇಬಲ್ ಟ್ರಸ್ಟ್ ಹಾಗೂ ಲೋಬೋ ಫೌಂಡೇಶನ್ ಜಂಟಿ ಆಶ್ರಯದಲ್ಲಿ ಮಂಗಳೂರಿನ ವಿವಿಧ ಹೋಬಳಿ ಮಟ್ಟದ ಶಾಲೆಗಳಲ್ಲಿ ಬಾಲಿಕಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬದಲಾಗುತ್ತಿರುವ ಸಾಮಾಜಿಕ ಪರಿಸ್ಥಿತಿ, ಹೆಣ್ಣು ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ, ಮಾನಸಿಕ ಸ್ಥೈರ್ಯ, ವಂಚನೆ, ಅಪರಾಧಗಳು, ಆತ್ಮಹತ್ಯೆಗಳು ಇತ್ಯಾದಿ ಶೋಷಣೆಯಿಂದ ಹೆಣ್ಣು ಮಕ್ಕಳನ್ನು ರಕ್ಷಿಸುವ ಅಗತ್ಯವಿದೆ.
ಈ ಅಭಿಯಾನದ ಮೂಲಕ ಆರೋಗ್ಯ, ಶಿಕ್ಷಣ, ಕಾನೂನು, ವ್ಯಕ್ತಿತ್ವ ವಿಕಾಸ, ಆತ್ಮವಿಶ್ವಾಸ, ಸೈಬರ್ ಸುಧಕ್ಷತೆ, ಜೀವನ ಕೌಶಲ್ಯಗಳ ಕುರಿತು ಸಮಗ್ರ ಮಾರ್ಗದರ್ಶನ ಮಾಹಿತಿ ನೀಡಲಾಗುವುದು. ಸಂವಾದದ ಮೂಲಕ ಪ್ರಶ್ನೆಗಳಿಗೆ ಉತ್ತರ ಒದಗಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಚಾರಿಟೇಬಲ್ ಟ್ರಸ್ಟ್ ನ ಕಾರ್ಯದರ್ಶಿ ಸವಾದ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನಲ್ ವಕೀಲೆ ಮಾನಸ ಹೆಗ್ಡೆ ಮಾತನಾಡಿ ಜಾಗ್ರತ ಹೆಣ್ಣು ಮಗು ಸುರಕ್ಷಿತ ಸಮಾಜದ ಅಡಿಪಾಯ ಆದುದರಿಂದ ವಿದ್ಯಾರ್ಥಿನಿಯರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಿ ಉತ್ತಮ ನಾಗರಿಕರನ್ನಾಗಿ ಮಾಡುವ ಅಗತ್ಯವಿದೆ ಎಂದರು. ರೋಷನಿ ನಿಲಯದ ಉಪನ್ಯಾಸಕಿ ಡಾ. ಅನುರಾಧ ಶೆಟ್ಟಿ ಮಾತನಾಡಿ ವಿದ್ಯಾರ್ಥಿನಿಯರಿಗೆ ಅಗತ್ಯ ಇರುವ ಕಾನೂನು ಮತ್ತು ಸಾಮಾಜಿಕ ಅರಿವನ್ನು ಮೂಡಿಸಬೇಕಾಗಿದೆ. ಸಮಾಜದ ಎಲ್ಲ ವರ್ಗಗಳು ಈ ಕಾರ್ಯಕ್ರಮಕ್ಕೆ ಕೈಜೋಡಿಸಿದರೆ ಸುರಕ್ಷಿತ ಹಾಗೂ ಉತ್ತಮ ಸಮಾಜದ ನಿರ್ಮಾಣ ಸಾಧ್ಯ ಇದೆ ಎಂದರು. ಲೋಬೊ ಫೌಂಡೇಶನ್ ಜಾನ್ ವಿಲ್ಸನ್ ಲೋಬೋ, ಈ ಸಂದರ್ಭ ಹಾಜರಿದ್ದರು.
ವರದಿ ರಾಯಿ ರಾಜ ಕುಮಾರ

