ಮಸೀದಿಯಲ್ಲಿ ಮೌಲ್ವಿಯಿಂದಲೇ ಬಾಲಕಿಯ ಅತ್ಯಾಚಾರ

0
26

ಬೆಳಗಾವಿ: ಮಸೀದಿಯಲ್ಲಿ ಮೌಲ್ವಿಯಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿರುವಂತಹ ಘಟನೆ 2023ರ ಅಕ್ಟೋಬರ್​ನಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯ ವೈರಲ್ ಬೆನ್ನಲ್ಲೇ ಬಾಲಕಿ ಪೋಷಕರನ್ನು ಹುಡುಕಿ ಕೇಸ್ ದಾಖಲಿಸಿಲಾಗಿದೆ. ಮಹಾಲಿಂಗಪುರದ ಮೌಲ್ವಿ ತುಫೇಲ್ ಅಹ್ಮದ್ ದಾದಾಪೀರ್​​ (22) ಎಂಬಾತನನ್ನು ಬಂಧಿಸಿದ ಮುರಗೋಡ ಪೊಲೀಸರು ಹಿಂಡಲಗಾ ಜೈಲಿಗಟ್ಟಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ ಎಸಗುವ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಘಟನೆ ನಡೆದು ಎರಡು ವರ್ಷ ಕಳೆದರೂ ಭಯ ಪಟ್ಟು ಬಾಲಕಿ ಪೋಷಕರು ಕೇಸ್ ನೀಡಿರಲಿಲ್ಲ. ವಿಡಿಯೋ ಸಿಗುತ್ತಿದ್ದಂತೆ ಪೊಲೀಸರೇ ಬಾಲಕಿ ತಂದೆಯ ಮನವೊಲಿಸಿ ಕೇಸ್ ದಾಖಲಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಎಂಬ ಎಕ್ಸ್​ ಖಾತೆಯಲ್ಲಿ ವಿಡಿಯೋ ವೈರಲ್​ ಆಗಿತ್ತು. 2023 ಅಕ್ಟೋಬರ್​ 5ರಂದು ಬೆಳಗಾವಿ ಜಿಲ್ಲೆಯ ಯರಗಟ್ಟಿಯ ಮಸೀದಿ ಒಂದರಲ್ಲಿ ಹೆಣ್ಣು ಮಗುವಿನ ಮೇಲೆ ನಡೆದಿರುವ ಈ ಅತ್ಯಾಚಾರಕ್ಕೆ ಆ ಮಗುವಿನ ತಂದೆ ನ್ಯಾಯ ಕೇಳುತ್ತಿದ್ದಾರೆ. ಮಸೀದಿಯವರು ಇವರನ್ನು ಹೆದರಿಸಿ ದೂರು ಕೊಡದಂತೆ ತಡೆದಿದ್ದಾರಂತೆ. ಈಗಳು ಆ ವ್ಯಕ್ತಿ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ದಯವಿಟ್ಟು ಕೂಡಲೇ ತನಿಖೆ ಮಾಡಿ ಕ್ರಮ ಜರುಗಿಸಿ ಆ ಹೆಣ್ಣು ಮಗುವಿಗೆ ನ್ಯಾಯ ಕೊಡಿಸಬೇಕೆಂದು ಕೇಳಿಕೊಳ್ಳುತ್ತಿದ್ದೇನೆ. ತಂದೆಯ ಹೆಸರು ಕುತುಬುದ್ದೀನ್​ ಎಂದು ಪೋಸ್ಟ್ ಮಾಡಲಾಗಿತ್ತು.

LEAVE A REPLY

Please enter your comment!
Please enter your name here