ಮಂಡ್ಯ: ಪ್ರೀತಿ, ಪ್ರೇಮದ ವಿಚಾರವಾಗಿ ಸುಳ್ಳು ಸುದ್ದಿ ಹಬ್ಬಿಸಿದ ಪರಿಣಾಮ ಮನನೊಂದ 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಹನಕೆರೆ ಗ್ರಾಮದಲ್ಲಿ ನಡೆದಿದೆ. ಹುಡುಗಿಯ ಬಗ್ಗೆ ನಾಲ್ವರು ಯುವಕರು ಅಪಪ್ರಚಾರ ನಡೆಸಿದ್ದರು ಎನ್ನಲಾಗಿದೆ. ಗಗನ್, ಸಂಜಯ್, ಮಹೇಂದ್ರ ಹಾಗೂ ಲೋಹಿತ್ ಎಂಬ ನಾಲ್ವರು ಯುವಕರು ಸುಳ್ಳುಸುದ್ದಿ ಹಬ್ಬಿಸಿದ್ದರು. ಮೃತ ಹುಡುಗಿ ಹಾಗೂ ಮಹೇಂದ್ರ ಇಬ್ಬರೂ ಪ್ರೀತಿಸುತ್ತಿದ್ದಾರೆ ಎಂದು ಊರ ತಂಬಾ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಇದ್ದರಿಂದ ಮನನೊಂದ ಬಾಲಕಿ, ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಅಲ್ಲದೆ ಮಹೇಂದ್ರ ಹಾಗೂ ಹುಡುಗಿ ಇಬ್ಬರೂ ಮತಾನಾಡುತ್ತಿರುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ 14 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.