Thursday, December 5, 2024
HomeUncategorizedಬಾಯಿಯ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ: ಡಾ|| ಚೂಂತಾರು

ಬಾಯಿಯ ಆರೋಗ್ಯಕ್ಕೆ ಪ್ರಾಮುಖ್ಯತೆ ನೀಡಿ: ಡಾ|| ಚೂಂತಾರು

ಬಾಯಿ ಎನ್ನುವುದು ನಮ್ಮ ದೇಹದ ಆರೋಗ್ಯದ ಬಗ್ಗೆ ಮಾಹಿತಿ ನೀಡುವ ಕೇಂದ್ರವಾಗಿರುತ್ತದೆ. ಹಲ್ಲು ನೋವಿನ ಹೊರತಾದ ಹತ್ತಾರು ರೋಗಗಳು ಪ್ರಕಣಗೊಳ್ಳುತ್ತದೆ. ರಕ್ತಹೀನತೆ, ವಿಟಮಿನ್ ಕೊರತೆ, ಲಿವರ್ ಸಮಸ್ಯೆ, ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಹಿಡಿದು ರಕ್ತದ ಕ್ಯಾನ್ಸರ್ ವರೆಗಿನ ಎಲ್ಲ ಮಾಹಿತಿಗಳು ಆರಂಭಿಕ ಹಂತದಲ್ಲಿಯೇ ಬಾಯಿಯಲ್ಲಿ ಕಂಡು ಬರುತ್ತದೆ. ದಂತ ವೈದ್ಯರು ಇದನ್ನು ಗುರುತಿಸಿ ತಿಳಿ ಹೇಳಿ ರೋಗಿಯನ್ನು ಜಾಗೃತಿಗೊಳಿಸುವ ಬಹುದೊಡ್ಡ ಜವಾಬ್ದಾರಿ ಹೊಂದಿರುತ್ತದೆ. ಈ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ನಿಭಾಯಿಸಿದಲ್ಲಿ ಸುಂದರ ಸಮೃದ್ಧ, ಸುದೃಢ ಭಾರತವನ್ನು ಕಟ್ಟಲು ಸಾಧ್ಯವಿದೆ ಎಂದು ಸುರಕ್ಷಾ ದಂತ ಚಿಕಿತ್ಸಾಲಯದ ಬಾಯಿ, ಮುಖ ಮತ್ತು ದವಡೆ ಶಸ್ತ್ರಚಿಕಿತ್ಸಕ ಹಾಗೂ ಖ್ಯಾತ ದಂತ ವೈದ್ಯರಾದ ಡಾ|| ಮುರಲೀ ಮೋಹನ್ ಚೂಂತಾರು ಅಭಿಪ್ರಾಯಪಟ್ಟರು.

ದಿನಾಂಕ: 21-10-2024ನೇ ಮಂಗಳವಾರದಂದು ತಲಪಾಡಿ ಸಮೀಪದ ನಾರ್ಲಪಡೀಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿನ ಮಕ್ಕಳಿಗೆ ಚೂಂತಾರು ಸರೋಜಿನಿ ಭಟ್ ಪ್ರತಿಷ್ಟಾನದ ವತಿಯಿಂದ ದಂತ ಆರೋಗ್ಯ ಮಾಹಿತಿ ಶಿಬಿರ ಜರುಗಿತು.ಈ ಸಂದರ್ಬದಲ್ಲಿ ಶಾಲಾ ಮುಖ್ಯೌಪಾದ್ಯಾಯಿನಿ ಜಯಂತಿ,ಶಿಕ್ಷಕಿಯರಾದ ಇಂದಿರಾ,ಜಾನೆಟ್ ಡಿಮೆಲ್ಲೋ,ರೇಖಾ ಉಪಸ್ಥಿತರಿದ್ರರು. ೩೫ ಮಕ್ಕಳಿಗೆ ಉಚಿತವಾಗಿ ಟೂತ್ ಪೇಸ್ಟ್ ಮತ್ತು ಟೂತ್ ಬ್ರಷ್ ವಿತರಿಸಲಾಯಿತು.

RELATED ARTICLES
- Advertisment -
Google search engine

Most Popular