ಅಮೆರಿಕದ ಸ್ಯಾನ್ ಡಿಯಾಗೋದಲ್ಲಿ ಪುತ್ತಿಗೆ ಶ್ರೀಗಳಿಂದ ಗೋಪೂಜೆ

0
26

ಉಡುಪಿ : ಬಲಿಪ್ರತಿಪದೆಯ ಪುಣ್ಯ ಸಂದರ್ಭದಲ್ಲಿ ಉಡುಪಿ ಶ್ರೀಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಸ್ಯಾನ್ ಡಿಯಾಗೋದಲ್ಲಿರುವ ಗೋಶಾಲೆಗೆ ಭೇಟಿ ನೀಡಿ, ಗೋಮಾತೆಯ ಪೂಜೆಯನ್ನು ಭಕ್ತಿಶ್ರದ್ಧೆಯಿಂದ ನೆರವೇರಿಸಿದರು.

ಶ್ರೀಕಂಠ ಶಾಸ್ತ್ರಿಗಳು ನಿರ್ವಹಿಸುತ್ತಿರುವ ಈ ಗೋಶಾಲೆಯಲ್ಲಿ ಗೋವುಗಳಿಗೆ ವಿಶೇಷ ಪೂಜೆ ಸಲ್ಲಿಸಿದ ಶ್ರೀಪಾದರು, ಲೋಕಕಲ್ಯಾಣಕ್ಕಾಗಿ ಪ್ರಾರ್ಥಿಸಿ ಭಕ್ತರನ್ನು ಅನುಗ್ರಹಿಸಿದರು. ಶ್ರೀಮಠದ ಶ್ರೀ ಪ್ರಸಾದಾಚಾರ್ಯರು ಪೂಜಾ ವಿಧಿವಿಧಾನಗಳನ್ನು ನಿರ್ವಹಿಸಿದರು. ಈ ಸಂದರ್ಭದಲ್ಲಿ ಶ್ರೀಕಂಠ ಶಾಸ್ತ್ರಿಗಳು, ಗೀತಾ ಪ್ರಚಾರಕರಾದ ಶ್ರೀ ಪಿ. ಎಸ್. ಆಚಾರ್ಯರು ಹಾಗೂ ಅನೇಕ ಭಕ್ತರು ಉಪಸ್ಥಿತರಿದ್ದರು.