ಬಸ್ಸಿನಲ್ಲಿ ಮಹಿಳೆಯ ಚಿನ್ನಾಭರಣ, ನಗದು ಕಳವು

0
33

ವಿಟ್ಲ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು 64 ಗ್ರಾಂ ತೂಕದ ಚಿನ್ನಾಭರಣ, ನಗದು ಹಾಗೂ ಅಗತ್ಯ ದಾಖಲೆಗಳು ಕಳವಾಗಿರುವ ಘಟನೆ ವರದಿಯಾಗಿದೆ.

ವಿಟ್ಲ ಸಮೀಪದ ಗ್ರಾಮದ ಪ್ರೇಮಾ (44) ಅವರು ಈ ಕುರಿತು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರೇಮಾ ಅವರು ತಮ್ಮ ಇಬ್ಬರು ಮಕ್ಕಳೊಂದಿಗೆ ಪೆರ್ಲದಲ್ಲಿರುವ ತಾಯಿಯ ಮನೆಯಿಂದ ವಿಟ್ಲಕ್ಕೆ ಬಂದು, ಅಲ್ಲಿಂದ ಮಂಗಳೂರಿಗೆ ತೆರಳುವ ಬಸ್ಸನ್ನು ಹತ್ತಿ ಕುಳಿತಿದ್ದರು.

ಪ್ರಯಾಣದ ವೇಳೆ ಅವರ ಬ್ಯಾಗ್ ತೆರೆದುಕೊಂಡಿದ್ದು, ಅದರಲ್ಲಿದ್ದ ಚಿನ್ನಾಭರಣಗಳು ಹಾಗೂ ಇತರ ವಸ್ತುಗಳು ಕಳವಾಗಿರುವುದು ಗಮನಕ್ಕೆ ಬಂದಿದೆ. ಕಳವಾದ ವಸ್ತುಗಳಲ್ಲಿ ಸುಮಾರು 64 ಗ್ರಾಂ ಚಿನ್ನಾಭರಣ, 3,000 ರೂ. ನಗದು, ಎಟಿಎಂ ಕಾರ್ಡ್, ಪಾನ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿಗಳು ಸೇರಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಯಾಣದ ಸಂದರ್ಭದಲ್ಲಿ ಜನಸಂದಣಿಯ ಲಾಭ ಪಡೆದು ಕಳ್ಳರು ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.