ಉಳ್ಳಾಲದ ಅಬ್ದುಲ್ ರೆಹಮಾನ್‌ಗೆ ಚಿನ್ನದ ಪದಕ; ರಾಷ್ಟ್ರಮಟ್ಟಕ್ಕೆ ಆಯ್ಕೆ

0
6


ವರದಿ ರಾಯಿ ರಾಜ ಕುಮಾರ್
ಮಾಸ್ಟರ್ ಅಥ್ಲೆಟಿಕ್ ಅಸೋಸಿಯೇಷನ್ ಆಫ್ ಕರ್ನಾಟಕ (ರಿ.) ವತಿಯಿಂದ ಧಾರವಾಡದ ಆರ್.ಎನ್. ಶೆಟ್ಟಿ ಸ್ಟೇಡಿಯಂನಲ್ಲಿ ನವೆಂಬರ್ 14 ಮತ್ತು 15 ರಂದು ಜರುಗಿದ 45ನೇ ರಾಜ್ಯಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್-2026 ಕ್ರೀಡಾಕೂಟದಲ್ಲಿ ಉಳ್ಳಾಲದ ಅಬ್ದುಲ್ ರೆಹಮಾನ್ ಅವರು ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.
ಕ್ರೀಡಾಕೂಟದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅಬ್ದುಲ್ ರೆಹಮಾನ್ ಅವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಜಯಿಸಿದ್ದಾರೆ. ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಲಿರುವ ಪ್ರತಿಷ್ಠಿತ ರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಇವರು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲೂ ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದ್ದಾರೆ.
.