ಮೂಲ್ಕಿ:ಶಾಲಾ ಶಿಕ್ಷಣ ಇಲಾಖೆ ಮತ್ತು ಉಪ ನಿರ್ದೇಶಕರ ಕಚೇರಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರುನ ಸಹಯೋಗದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಜರಗಿದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ 19 ರ ವಯೋಮಾನದ ಬಾಲಕಿಯರ ವಿಭಾಗದ 68 ಪ್ಲಸ್ ಕೆಜಿ ವಿಭಾಗದಲ್ಲಿ, ಮೂಲ್ಕಿಯ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸ್ಪೂರ್ತಿಯಾವರು ಚಿನ್ನದ ಪದಕ ಪಡೆದು ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಆಯ್ಕೆಯಾಗಿದ್ದಾರೆ. ಇವರು ಕರಾಟೆ ಶಿಕ್ಷಕ ಪ್ರಕಾಶ್ ಇವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.