ಚಿನ್ನದ ಬೆಲೆ ಗ್ರಾಮ್​ಗೆ 285 ರೂ ಹೆಚ್ಚಳ

0
8

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯ ಹಾದಿಗೆ ಬಂದಂತಿದೆ. ಈ ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​ಗೆ 285 ರೂನಷ್ಟು ಹೆಚ್ಚಳ ಆಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲಿ ಬಹುತೇಕ ಕಡೆ ಇದರ ಬೆಲೆಯಲ್ಲಿ ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಕೂಡ ಗ್ರಾಮ್​ಗೆ 5 ರೂನಿಂದ 20 ರೂವರೆಗೆ ಹೆಚ್ಚಳ ಆಗಿದೆ. ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 5 ರೂ ಏರಿ 275 ರೂ ಮುಟ್ಟಿದೆ. ಚೆನ್ನೈ ಮೊದಲಾದೆಡೆ ಬೆಲೆ 20 ರೂ ಹೆಚ್ಚಳಗೊಂಡು 290 ರೂ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,46,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,59,280 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 27,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 1,46,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 27,500 ರುಪಾಯಿಯಲ್ಲಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 29,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 22ಕ್ಕೆ)

  • 24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 15,928 ರೂ
  • 22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,600 ರೂ
  • 18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 11,946 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ
  • ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.

LEAVE A REPLY

Please enter your comment!
Please enter your name here