ಬೆಂಗಳೂರು : ಚಿನ್ನ ಕಳ್ಳಸಾಗಾಣಿಕೆ ಆರೋಪದ ಮೇಲೆ ನಟಿ ರನ್ಯಾ ರಾವ್ ರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಅಧಿಕಾರಿಗಳು ಬಂಧಿಸಿದ್ದಾರೆ. ಡಿಆರ್ಐ ಅಧಿಕಾರಿಗಳ ತನಿಖೆ ವೇಳೆ ರನ್ಯಾ ರಾವ್ ಚಿನ್ನವನ್ನು ಅಕ್ರಮವಾಗಿ ವಿಮಾನ ನಿಲ್ದಾಣದಿಂದ ಹೇಗೆ ಸಾಗಿಸುತ್ತಿದ್ದಳು ಎಂಬುವುದು ಪತ್ತೆಹಚ್ಚಿದ್ದಾರೆ. ದುಬೈನಿಂದ ಅಕ್ರಮವಾಗಿ ತಂದ ಚಿನ್ನವನ್ನು ನಟಿ ರನ್ಯಾ ರಾವ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸರ್ಕಾರಿ ವಾಹನದಲ್ಲಿ ಸಾಗಿಸುತ್ತಿದ್ದರು ಎಂಬುವುದು ಡಿಆರ್ಐ ತನಿಖೆ ವೇಳೆ ಬಹಿರಂಗವಾಗಿದೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಐಪಿಎಸ್ ಅಧಿಕಾರಿಗಳಿಗೆ ಎರಡು ಹೆಚ್ಚುವರಿ ಕಾರುಗಳನ್ನು ನೀಡಲಾಗುತ್ತದೆ. ಈ ಹೆಚ್ಚುವರಿ ಕಾರು ಅಧಿಕಾರಿಯವರ ಕುಟುಂಬದವರಿಗೆ ಬಳಕೆಯಾಗುತ್ತದೆ. ಅದೇ ರೀತಿ, ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಕೂಡ ಸರ್ಕಾರ ಹೆಚ್ಚುವರಿ ಕಾರು ನೀಡಲಾಗಿತ್ತು. ಈ ಸರ್ಕಾರಿ ವಾಹನದಲ್ಲೇ ರನ್ಯಾ ರಾವ್ ಚಿನ್ನವನ್ನು ಸಾಗಿಸಿದ್ದಾರೆ. ರನ್ಯಾ ರಾವ್ ಇದೇ ವಾಹನದಲ್ಲಿ ಹಲವು ಬಾರಿ ವಿಮಾನ ನಿಲ್ದಾಣಕ್ಕೆ ಓಡಾಡುತಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.