ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ಕರ್ನಾಟಕ ಸುವರ್ಣ ಪ್ರಶಸ್ತಿ ಪುರಸ್ಕೃತರಾದ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನಡೆದ ಸನ್ಮಾನ ಸಮಾರಂಭದಲ್ಲಿ ಅಭ್ಯುದಯ ಭಾರತಿ ಸೇವಾ ಟ್ರಸ್ಟ್ ಕಾಟಿಪಳ್ಳ ಗಣೇಶಪುರ ವತಿಯಿಂದ ಸನ್ಮಾನಿಸಲಾಯಿತು. ನೂತನ ಕಟ್ಟಡ ಸಮಿತಿಯ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ಮನಪಾ ಸದಸ್ಯರಾದ ಲೋಕೇಶ್ ಬೊಳ್ಳಾಜೆ, ಅಭ್ಯುದಯ ಸೇವಾ ಟ್ರಸ್ಟ್ ಅಧ್ಯಕ್ಷ ಜಯಕುಮಾರ್, ಮಧುಸೂದನ್ ರಾವ್, ಹರೀಶ್ ಕುಮಾರ್, ರಾಜೇಶ್ ಕರ್ಕಡ ಮುಂತಾದವರು ಉಪಸ್ಥಿತರಿದ್ದರು.