ಉತ್ತಮ ಹವ್ಯಾಸಗಳು ಬದುಕಿಗೆ ಹೊಸ ಅರ್ಥ ನೀಡಬಲ್ಲದು : ರಾಘವೇಂದ್ರ ಕರ್ವಾಲು

0
34

ಕಟಪಾಡಿ : ನಮ್ಮ ದೃಷ್ಟಿಕೋನವನ್ನು ಬದಲಾಯಿಸಿದಲ್ಲಿ ದೃಶ್ಯ ಬದಲಾಗಬಹುದು, ಉತ್ತಮ ಹವ್ಯಾಸಗಳು ನಮ್ಮ ಜೀವನಕ್ಕೆ ಹೊಸ ಅರ್ಥವನ್ನು ನೀಡಬಲ್ಲದು ಎಂದು ವ್ಯಕ್ತಿತ್ವ ವಿಕಸನ ತರಬೇತಿದಾರ ರಾಘವೇಂದ್ರ ಪ್ರಭು ಕರ್ವಾಲು ಹೇಳಿದರು.

ಅವರು ಬೆಳ್ಮಣ್ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ನಡೆದ ಮಾದಕ ವ್ಯಸನ ತಡೆಗಟ್ಟುವ ದಿನಾಚರಣೆ ಅಂಗವಾಗಿ ಜೂನ್ 25ರಂದು ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಜೆಸಿಐ ಬೆಳ್ಮಣ್,ಕಾಲೇಜಿನ ಇಕೋ ಕ್ಲಬ್ ಮತ್ತು ಸ್ಥಳೀಯ ಗ್ರಾಮ ಪಂಚಾಯತ್ ಸಂಜೀವಿನಿ ಒಕ್ಕೂಟದ ವತಿಯಿಂದ ಕಾರ್ಯಕ್ರಮ ನಡೆಯಿತು.

ವಿದ್ಯಾರ್ಥಿಗಳು ಕೆಟ್ಟ ಆಲೋಚನೆಗಳಿಂದ ದೂರವಿರಬೇಕು. ದುಶ್ಚಟಗಳಿಂದ ಆರೋಗ್ಯ, ಆರ್ಥಿಕ ಮತ್ತು ಸಾಮಾಜಿಕವಾಗಿ ಬಹಳಷ್ಟು ತೊಂದರೆ ಅನುಭವಿಸಬೇಕಾಗುತ್ತದೆ ಈ ನಿಟ್ಟಿನಲ್ಲಿ ಉತ್ತಮ ಹವ್ಯಾಸಗಳನ್ನು ರೂಢಿಸಿಕೊಳ್ಳಿ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ಮಣ್ ಅಧ್ಯಕ್ಷ ವೀರೇಂದ್ರ ಆರ್ ಕೆ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ಗೋಪಾಲ್, ಜಯಂತಿ ಶೆಟ್ಟಿ, ವಲಯ ಉಪಾಧ್ಯಕ್ಷ ಪ್ರದೀಪ್ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಶಾಮುಕ್ತ ಭಾರತ ಪ್ರಮಾಣವಚನ ಬೋಧಿಸಲಾಯಿತು.

LEAVE A REPLY

Please enter your comment!
Please enter your name here