ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : 6 ತಿಂಗಳಲ್ಲಿ 72,186 ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಆದೇಶ..!

0
15

ಬೆಂಗಳೂರು : ರಾಜ್ಯದ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿನ 72,186 ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಆದೇಶ ಹೊರಡಿಸಿದೆ.

2026ರ ಜೂನ್ 24ರಂದು ಹೊರಡಿಸಲಾದ ಆದೇಶದ ಪ್ರಕಾರ, ಶಿಕ್ಷಣ, ಪೊಲೀಸ್, ಆರೋಗ್ಯ, ಕಂದಾಯ ಸೇರಿದಂತೆ ವಿವಿಧ ಪ್ರಮುಖ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳನ್ನು ಮುಂದಿನ 6 ತಿಂಗಳೊಳಗೆ ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದೆ.

ನಿರುದ್ಯೋಗ ಸಮಸ್ಯೆ ಕಡಿಮೆ ಮಾಡುವುದು ಹಾಗೂ ಆಡಳಿತಾತ್ಮಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಶೀಘ್ರದಲ್ಲೇ ಇಲಾಖಾವಾರು ನೇಮಕಾತಿ ಅಧಿಸೂಚನೆಗಳು ಪ್ರಕಟವಾಗಲಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆನ್‌ಲೈನ್ ಮೂಲಕ ನಡೆಯಲಿದೆ.

ಹುದ್ದೆಗಳ ವಿವರ

 40,009 ಹುದ್ದೆಗಳು: 2023-24ನೇ ಸಾಲಿನಿಂದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಈಗಾಗಲೇ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.

32,177 ಹುದ್ದೆಗಳು: ಕಲ್ಯಾಣ ಕರ್ನಾಟಕ ಸ್ಥಳೀಯ ವೃಂದದ ಹುದ್ದೆಗಳ ಪೈಕಿ ಶೇ. 80ರಷ್ಟು ಹುದ್ದೆಗಳ ಭರ್ತಿಗೂ ಸಮ್ಮತಿ ನೀಡಲಾಗಿದೆ.

ಒಟ್ಟು ಭರ್ತಿಯಾಗಲಿರುವ ಹುದ್ದೆಗಳು: 72,186

ನೇಮಕಾತಿ ಮೇಲ್ವಿಚಾರಣೆ

ರಾಜ್ಯದ ವಿವಿಧ ಇಲಾಖೆಗಳ ನೇಮಕಾತಿ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲು ಹಿರಿಯ ಅಧಿಕಾರಿಗಳಿಗೆ ಜವಾಬ್ದಾರಿ ವಹಿಸಲಾಗಿದೆ.

17 ಇಲಾಖೆಗಳ ನೇಮಕಾತಿ ಮೇಲ್ವಿಚಾರಣೆ – ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು

34 ಇಲಾಖೆಗಳ ನೇಮಕಾತಿ ಮೇಲ್ವಿಚಾರಣೆ – ಅಪರ ಮುಖ್ಯ ಕಾರ್ಯದರ್ಶಿಗಳು

ಕಾಲಮಿತಿ ನಿಗದಿ

2 ತಿಂಗಳಲ್ಲಿ – ನೇಮಕಾತಿ ಅಧಿಸೂಚನೆ ಪ್ರಕಟ

4 ತಿಂಗಳಲ್ಲಿ – ಸ್ಪರ್ಧಾತ್ಮಕ ಪರೀಕ್ಷೆಗಳ ಆಯೋಜನೆ

6 ತಿಂಗಳಲ್ಲಿ – ನೇಮಕಾತಿ ಪೂರ್ಣಗೊಳಿಸಿ ಆದೇಶ ವಿತರಣೆ

ಜೂನ್ 20ರಂದು ನಡೆದ ಸಚಿವ ಸಂಪುಟ ಸಭೆಯ ನಿರ್ಣಯದಂತೆ ಈ ಆದೇಶವನ್ನು ರಾಜ್ಯಪಾಲರ ಅನುಮೋದನೆಯೊಂದಿಗೆ ಹೊರಡಿಸಲಾಗಿದೆ.

LEAVE A REPLY

Please enter your comment!
Please enter your name here