ರಾಜ್ಯದ SC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಪ್ರಥಮ ದರ್ಜೆ ಪಾಸಾದವರಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

0
72

ಧಾರವಾಡ : 2026ನೇ ಸಾಲಿನ ಮಾರ್ಚ್ ಹಾಗೂ ಏಪ್ರಿಲ್ ತಿಂಗಳಲ್ಲಿ ನಡೆದ ಮೆಟ್ರಿಕ್ ನಂತರದ ವಿವಿಧ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ (SC) ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹಧನ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಂತಿಮ ವರ್ಷದ ಪಿಯುಸಿ, 12ನೇ ತರಗತಿ ಹಾಗೂ ಐಟಿಐ ವಿದ್ಯಾರ್ಥಿಗಳು ಪ್ರಥಮ ಪ್ರಯತ್ನದಲ್ಲೇ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ವೈದ್ಯಕೀಯ ಕೋರ್ಸುಗಳಲ್ಲಿ ಸೆಮಿಸ್ಟರ್ ಪದ್ಧತಿ ಇದ್ದಲ್ಲಿ ಎಲ್ಲಾ ಸೆಮಿಸ್ಟರ್‌ಗಳಲ್ಲೂ ಮೊದಲ ಪ್ರಯತ್ನದಲ್ಲೇ ಪಾಸಾಗಿರುವುದು ಕಡ್ಡಾಯವಾಗಿದೆ.

ಪ್ರತಿ ವರ್ಷದ ಪರೀಕ್ಷೆ ಅಥವಾ ಸೆಮಿಸ್ಟರ್‌ಗಳಲ್ಲಿ compartmental ಅಥವಾ carry over ವ್ಯವಸ್ಥೆಯಡಿ ಪಾಸಾದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನ ಪಡೆಯಲು ಅರ್ಹರಾಗಿರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.

ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಬಳಿಕ ಅದರ ಪ್ರತಿಯೊಂದಿಗೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ, ದೃಢೀಕರಿಸಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಡಿ.ಸಿ. ಕಂಪೌಂಡ್, ಧಾರವಾಡ ಇಲ್ಲಿಗೆ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

LEAVE A REPLY

Please enter your comment!
Please enter your name here