ದೀಪಾವಳಿ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾದ ಶ್ರೀಕೃಷ್ಣ ಮಠದ ಗೋಪೂಜೆ

0
7

ಉಡುಪಿ : ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯ ಶ್ರೀಕೃಷ್ಣ ಮಠದ ಪರ್ಯಾಯ ಶ್ರೀ ಶೀರೂರು ಮಠದಲ್ಲಿ ಗೋಪೂಜೆ ಕಾರ್ಯಕ್ರಮವು ಭಕ್ತಿಭಾವದಿಂದ ಹಾಗೂ ವೈಭವದಿಂದ ನೆರವೇರಿತು.

ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಗೋವುಗಳನ್ನು ವಿವಿಧ ರೀತಿಯಲ್ಲಿ ಅಲಂಕರಿಸಿ ವಿಶೇಷ ನೈವೇದ್ಯ ಸಮರ್ಪಿಸಲಾಯಿತು. ಬಳಿಕ ಗೋವುಗಳಿಗೆ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪೂಜೆ ಸಲ್ಲಿಸಿ ಮೆರವಣಿಗೆ ನಡೆಸಲಾಯಿತು.

ದೀಪಾವಳಿ ಸಂದರ್ಭದಲ್ಲಿ ಗೋಮಾತೆಗೆ ಪೂಜೆ ಸಲ್ಲಿಸುವ ಧಾರ್ಮಿಕ ಸಂಪ್ರದಾಯವನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಠದ ದಿವಾನರು, ಪಾರುಪತ್ಯೆದಾರರು, ಸಿಬ್ಬಂದಿ ವರ್ಗದವರು ಹಾಗೂ ಗೋಪಾಲಕರು ಉಪಸ್ಥಿತರಿದ್ದರು.