ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ಬಿನಲ್ಲಿ ಶ್ರದ್ಧಾ-ಭಕ್ತಿಯ ಗೋಪೂಜೆ

0
22

ಗೋಮಾತೆಯ ಆರಾಧನೆ – ಸಕಲ ಜೀವಿಗಳ ಕಲ್ಯಾಣದ ಸಂಕಲ್ಪ – ಸುರೇಶ್ ಅಬ್ಬನಡ್ಕ

ಗೋವು ನಮ್ಮ ಸಂಸ್ಕೃತಿಯ ಜೀವಾಳ – ಅಬ್ಬನಡ್ಕ ಸಂದೀಪ್ ವಿ. ಪೂಜಾರಿ

ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ವಿಜೇತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಹಾಗೂ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ನೇತೃತ್ವದಲ್ಲಿ ಅಬ್ಬನಡ್ಕದಲ್ಲಿ ಲೋಕಕಲ್ಯಾಣಾರ್ಥವಾಗಿ ಹಾಗೂ ಸಕಲರ ಅಭ್ಯುದಯಕ್ಕಾಗಿ ಶ್ರದ್ಧಾ-ಭಕ್ತಿಯಿಂದ ಗೋಪೂಜೆ ನೆರವೇರಿತು.

ಧಾರ್ಮಿಕ ಶ್ರದ್ಧೆ, ಸಂಪ್ರದಾಯ ಮತ್ತು ಲೋಕಕಲ್ಯಾಣದ ಸಂಕಲ್ಪದೊಂದಿಗೆ ನಡೆದ ಈ ಪುಣ್ಯ ಕಾರ್ಯಕ್ರಮದಲ್ಲಿ ಅಬ್ಬನಡ್ಕ ಸಂಘದ ಹಾಗೂ ಭಜನಾ ಮಂಡಳಿಯ ಭಾಗವಹಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸುರೇಶ್ ಅಬ್ಬನಡ್ಕ ಅವರು ಮಾತನಾಡಿ ಹಿಂದೂ ಸಂಸ್ಕೃತಿಯಲ್ಲಿ ಗೋ ಪೂಜೆಗೆ ಅತ್ಯಂತ ಮಹತ್ವದ ಸ್ಥಾನವಿದೆ. ಗೋವಿನಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆ ಎಂದು ನಂಬಲಾಗುತ್ತದೆ. ಗೋಮಾತೆಯ ಆರಾಧನೆ – ಸಕಲ ಜೀವಿಗಳ ಕಲ್ಯಾಣದ ಸಂಕಲ್ಪ ಎಂದರು.

ಗೋವು ಕೇವಲ ಪ್ರಾಣಿಯಲ್ಲ, ಅದು ನಮ್ಮ ಸಂಸ್ಕೃತಿ, ನಮ್ಮ ಶ್ರದ್ಧೆ, ನಮ್ಮ ಜೀವನದ ಅವಿಭಾಜ್ಯ ಅಂಗ. ಗೋವನ್ನು ಪೂಜಿಸುವುದೆಂದರೆ ಪ್ರಕೃತಿಯನ್ನು ಪೂಜಿಸಿದಂತೆ. ದೀಪಾವಳಿಯ ಈ ಪವಿತ್ರ ಸಂದರ್ಭದಲ್ಲಿ ಗೋಮಾತೆಯ ಆರಾಧನೆ ಮಾಡುವುದರಿಂದ ಸಮಾಜದಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ. ಗೋ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಸುಭಾಷ್ ಕುಮಾರ್, ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಆಚಾರ್ಯ, ಜೊತೆ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಕೋಶಾಧಿಕಾರಿ ಶ್ರೀಕಾಂತ್ ಆಚಾರ್ಯ, ಪೂರ್ವಾಧ್ಯಕ್ಷರಾದ ಸುರೇಶ್ ಕಾಸರಬೈಲು, ಸತೀಶ್ ಅಬ್ಬನಡ್ಕ, ಅಬ್ಬನಡ್ಕ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಪ್ರದೀಪ್ ಸುವರ್ಣ, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷರಾದ ಅಶ್ವಿನಿ ಬೋಳ, ಸಂಘದ ಸದಸ್ಯರಾದ ಹರೀಶ್ ಪೂಜಾರಿ, ಕೀರ್ತನ್ ಪೂಜಾರಿ, ಯೋಗೀಶ್ ಆಚಾರ್ಯ, ಲೀಲಾ ಪೂಜಾರಿ, ಸಂಧ್ಯಾ ಶೆಟ್ಟಿ, ವೀಣಾ ಪೂಜಾರಿ, ಅನ್ನಪೂರ್ಣ ಕಾಮತ್, ತ್ರಿವೇಣಿ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.