ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ; ಮಹಿಳೆ ಸಾವು, 8 ಮಂದಿಗೆ ಗಾಯ

0
8

ಧಾರವಾಡ : ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ಚಲಿಸುತ್ತಿದ್ದ ಸರ್ಕಾರಿ ಬಸ್‌ನ ಮುಂಭಾಗದ ಟೈರ್ ಸ್ಫೋಟಗೊಂಡ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಪಲ್ಟಿಯಾದ ದುರ್ಘಟನೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.

ಮೃತರನ್ನು ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಹುಸೇನಾಬಿ ಕೆಂಗನೂರ ಎಂದು ಗುರುತಿಸಲಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡದಿಂದ ಮಿರಜ್‌ಗೆ ತೆರಳುತ್ತಿದ್ದ ಸರ್ಕಾರಿ ಬಸ್‌ನ ಮುಂಭಾಗದ ಟೈರ್ ಸ್ಫೋಟಗೊಂಡ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ನುಗ್ಗಿ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಬಸ್‌ನ ಗಾಜುಗಳು ಪುಡಿಪುಡಿಯಾಗಿದ್ದು, ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಅಪಘಾತ ನಡೆದ ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ರಕ್ಷಣಾ ಕಾರ್ಯಕ್ಕೆ ಧಾವಿಸಿ ಗಾಯಾಳುಗಳನ್ನು ಬಸ್‌ನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಿದರು. ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದೇ ವೇಳೆ, ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಗ್ರಾಮದಲ್ಲೂ ಮತ್ತೊಂದು ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದ ಪರಿಣಾಮ ದಗ್ಗೆ ಗ್ರಾಮದ ಪ್ರದೀಪ್ (30) ಮೃತಪಟ್ಟಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು