Monday, December 2, 2024
HomeUncategorizedಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದೆಹಲಿ: ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಖಾಸಗಿ ಆಸ್ತಿಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಒಂಬತ್ತು ನ್ಯಾಯಮೂರ್ತಿಗಳ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ.
ಸಂವಿಧಾನದ ಪರಿಚ್ಛೇದ 39(ಬಿ) ಅಡಿಯಲ್ಲಿ ಪ್ರತಿಯೊಂದು ಖಾಸಗಿ ಆಸ್ತಿಯನ್ನು ಸಮುದಾಯದ ಆಸ್ತಿಯ ಭಾಗವಾಗಿ ಪರಿಗಣಿಸಲಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಹೇಳಿದೆ.
ಖಾಸಗಿ ಆಸ್ತಿಯು ಸಮುದಾಯದ ಭೌತಿಕ ಸಂಪನ್ಮೂಲಗಳ ಭಾಗವಾಗಿರಬಹುದು. ಆದರೆ ವ್ಯಕ್ತಿಯ ಒಡೆತನದ ಪ್ರತಿಯೊಂದು ಸಂಪನ್ಮೂಲವು ಸಮುದಾಯದ ಭೌತಿಕ ಸಂಪನ್ಮೂಲಗಳ ಭಾಗವಾಗಿರುವುದು ಅನಿವಾರ್ಯವಲ್ಲ ಎಂದು ಪೀಠವು ಮೂರು ಭಾಗಗಳ ತೀರ್ಪಿನಲ್ಲಿ ಹೇಳಿದೆ.
ಈ ತೀರ್ಪಿನೊಂದಿಗೆ, ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಬಹುದು ಎಂದು ಹೇಳಿದ್ದ ನ್ಯಾಯಮೂರ್ತಿ ಕೃಷ್ಣ ಅಯ್ಯರ್ ಅವರ 1978 ರ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತು.

RELATED ARTICLES
- Advertisment -
Google search engine

Most Popular