ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು – 2004–2005 ಸಾಲಿನ ಹಳೆ ವಿದ್ಯಾರ್ಥಿಗಳ ಸವಿ ನೆನಪು ಕಾರ್ಯಕ್ರಮವು ಸಡಗರ ಸಂಭ್ರಮದಲ್ಲಿ ಯಶಸ್ವಿಯಾಗಿ ನಡೆಯಿತು.

ಶಿಕ್ಷಕರಾದ ರಾಜೇಂದ್ರ ನಾಯಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿ ಜೀವನದ ನೆನಪುಗಳನ್ನು ಮತ್ತೆ ಮೆಲುಕು ಹಾಕುವ ಇಂತಹ ಕಾರ್ಯಕ್ರಮಗಳು ಸ್ನೇಹ ಮತ್ತು ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತವೆ 21 ವರ್ಷಗಳ ಬಳಿಕ ಪ್ರಪ್ರಥಮ ಬಾರಿಗೆ ಈ ಶಾಲೆಯಲ್ಲಿ ಹಳೆಯ ವಿದ್ಯಾರ್ಥಿಗಳು ಒಂದಾಗಿ ಕಾಲೇಜಿನೊಂದಿಗೆ ಬಾಂಧವ್ಯ ಉಳಿಸಿಕೊಂಡಿರುವುದು ಶ್ಲಾಘನೀಯ,ಸಮಾಜಕ್ಕೆ ಮಾದರಿಯಾಗುವಂತಹ ಕಾರ್ಯಕ್ರಮ ಇದಾಗಿದೆ ಮುಂದೆಯೂ ಇಂತಹ ಸವಿ ನೆನಪುಗಳ ಕಾರ್ಯಕ್ರಮಗಳು ನಡೆಯಲಿ ಎಂದು ಶುಭ ಹಾರೈಸಿದರು.
ಹಳೆ ವಿದ್ಯಾರ್ಥಿ ಪ್ರಕಾಶ್ಚಂದ್ರ ಶೆಟ್ಟಿ ಕಾಲ್ತೋಡು ಅವರು ಮಾತನಾಡಿ, 21 ವರ್ಷಗಳ ಬಳಿಕ ನಾವೆಲ್ಲರೂ ಒಂದೇ ವೇದಿಕೆಯಲ್ಲಿ ಒಟ್ಟಾಗಿರುವುದು ಅವಿಸ್ಮರಣೀಯ ಕ್ಷಣವಾಗಿದೆ. ವಿದ್ಯಾರ್ಥಿ ಜೀವನದ ಸವಿ ನೆನಪುಗಳನ್ನು ಮತ್ತೆ ಮೆಲುಕು ಹಾಕಲು ಈ ಕಾರ್ಯಕ್ರಮ ಅವಕಾಶ ಕಲ್ಪಿಸಿದೆ,ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದ ಎಲ್ಲಾ ಸ್ನೇಹಿತರು ಹಾಗೂ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದರು. ಭಾಗವಹಿಸಿದ ಪ್ರತಿಯೊಬ್ಬರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ಸಮರ್ಪಿಸಿದರು.
ತಮಗೆ ಶಿಕ್ಷಣ ನೀಡಿದ ಗುರುಗಳಿಗೆ ಹಳೆ ವಿದ್ಯಾರ್ಥಿಗಳು ಗೌರವಪೂರ್ವಕವಾಗಿ ಗುರುವಂದನೆ ಸಮರ್ಪಿಸಿದರು. ವಿದ್ಯಾರ್ಥಿ ಜೀವನದಲ್ಲಿ ಮಾರ್ಗದರ್ಶನ ನೀಡಿದ ಶಿಕ್ಷಕರ ಸೇವೆಯನ್ನು ಸ್ಮರಿಸಿ ಕೃತಜ್ಞತೆ ವ್ಯಕ್ತಪಡಿಸಿದರು. ಈ ಕ್ಷಣವು ಭಾವನಾತ್ಮಕ ಹಾಗೂ ಸ್ಮರಣೀಯವಾಗಿ ಮೂಡಿಬಂತು.
ಹಳೆ ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮನರಂಜನಾ ಚಟುವಟಿಕೆಗಳನ್ನು ಆಯೋಜಿಸಲಾಯಿತು. ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು. ವಿವಿಧ ಸ್ಪರ್ಧೆಗಳಲ್ಲಿ ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿ ಗೌರವಿಸಲಾಯಿತು
ಸಂಸ್ಥೆಯ ಪ್ರಾಂಶುಪಾಲರಾದ ನಾಗರಾಜ್ ಶೆಟ್ಟಿ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ರಾಮರಾಯರು, ದಾಮೋದರ್ ಸರ್ ,ಉದಯ್ ಕುಮಾರ್ ಶೆಟ್ಟಿ, ಉಪನ್ಯಾಸಕರದ ಮಣಿಕಂಠ ಸರ್,CDMC ಉಪಾಧ್ಯಕ್ಷರಾದ ಮುತ್ತಯ್ಯ ಪೂಜಾರಿ ಹಾಗೂ ಸಂಸ್ಥೆಯ ಉಪನ್ಯಾಸಕರು ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ರಾಘವೇಂದ್ರ ಗೋಳಿಹೊಳೆ ಸ್ವಾಗತಿಸಿದರು. ಉಪನ್ಯಾಸಕರಾದ ಉದಯ ನಾಯಕ್ ನಿರೂಪಿಸಿದರು. ಉದಯ ನಾಯಕ್ ವಂದಿಸಿದರು.

