ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಲು ಆಯಂಟಿ ನಾರ್ಕೋಟಿಕ್ಸ್ ಟಾಸ್ಕ್ ಫೋರ್ಸ್ ಎನ್ನುವ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ. ಸಲೀಂ ತಿಳಿಸಿದ್ದಾರೆ.
ಬುಧವಾರ ಪ್ರೆಸ್ ಕ್ಲಬ್ ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿ, ಡ್ರಗ್ಸ್ ಜಾಲಕ್ಕೆ ಕಡಿವಾಣ ಹಾಕಲು ವಿಶೇಷ ಕಾರ್ಯಪಡೆ ರಚಿಸಿದ್ದು, ಈ ತಂಡಕ್ಕೆ 66 ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ಡ್ರಗ್ಸ್ ವ್ಯಸನಿಗಳ ಮೇಲೆ ಮಾತ್ರ ಪ್ರಕರಣ ದಾಖಲಾಗುತ್ತಿತ್ತು. ಈ ಕಾರ್ಯಪಡೆ ಎಲ್ಲಿಂದ ಡ್ರಗ್ಸ್ ಸರಬರಾಜು ಮಾಡಲಾಗುತ್ತಿದೆ ಎನ್ನುವುದನ್ನು ಪತ್ತೆ ಹಚ್ಚಿ ಡ್ರಗ್ಸ್ ಸರಬರಾಜು ಮಾಡುವವರು ಸೇರಿದಂತೆ ಈ ಜಾಲದಲ್ಲಿ ತೊಡಗಿರುವ ಎಲ್ಲರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

