ಬಂಟ್ವಾಳ ತಾಲೂಕಿನ ಸರಕಾರಿ ಪ್ರೌಢಶಾಲೆ ಗೋಳ್ತಮಜಲು 2024 -25 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶವು 100% ಬಂದಿರುತ್ತದೆ. ಶ್ರೇಯ 556 ಪ್ರಥಮ,
ಖತಿಝತ್ತುಲ್ ಝುಲ್ಫ 543 ದ್ವಿತೀಯ
ಎನ್ ಕೀರ್ತೇಶ್ 533 ತೃತೀಯ ಸ್ಥಾನ ಪಡೆದಿರುತ್ತಾರೆ. ನಾಲ್ವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಪರೀಕ್ಷೆಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಇವರಿಗೆ ಶಿಕ್ಷಕರು, ಪಾಲಕ ಪೋಷಕರು, ಹಿರಿಯ ವಿದ್ಯಾರ್ಥಿಗಳು, ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷರಾದ ಚಂದ್ರಶೇಖರ್ ರವರು ಹಾಗೂ ಸದಸ್ಯರು ಶುಭ ಹಾರೈಸಿರುತ್ತಾರೆ.
ಈ ಶಾಲೆಯಲ್ಲಿ ಮುಖ್ಯ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರು ಒಳಗೊಂಡಂತೆ ಎಲ್ಲಾ ವಿಷಯಗಳಿಗೂ ಶಿಕ್ಷಕರಿದ್ದು, ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಮತ್ತು ಪ್ರಯೋಗಾಲಯದ ಜೊತೆಗೆ ಎಲ್ಲಾ ಭೌತಿಕ ಸೌಲಭ್ಯಗಳು ಇದ್ದು ಮಕ್ಕಳು ಉತ್ತಮ ಶಿಕ್ಷಣ ಪಡೆಯುತ್ತಿರುವುದಕ್ಕೆ ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರು ಶೇಕಡ ಬಂದಿರುವುದೇ ಸಾಕ್ಷಿಯಾಗಿದೆ.