ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪಾಡ್ಯಾರು ಪ್ರಾರಂಭೋತ್ಸವ

0
33


ಮೂಡುಬಿದಿರೆ: ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಡ್ಯಾರು ಇಲ್ಲಿ 2026-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಪಡುಮಾರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯಿ ಚೌಟ ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು.

ಶಾಲಾ ಸ್ಥಾಪಕ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ದಯಾನಂದ ಪೈ ವಿದ್ಯಾರ್ಥಿಗಳಿಗೆ ಸರಕಾರದಿಂದ ಒದಗಿಸಲಾದ ಪಠ್ಯಪುಸ್ತಕಗಳನ್ನು ವಿತರಿಸಿದರು. ನಿಕಟ ಪೂರ್ವ ಗ್ರಾಮ ಪಂಚಾಯತ್ ಸದಸ್ಯ ನಿತಿನ್ ಕೋಟ್ಯಾನ್ ಎಸ್ ಡಿ ಎಂ ಸಿ ಅಧ್ಯಕ್ಷ ರಮೇಶ್ ಆಚಾರ್ಯ ಉಪಸ್ಥಿತರಿದ್ದರು ಶಾಲೆಯ ಹಳೆ ವಿದ್ಯಾರ್ಥಿಗಳು ಶಾಲೆಯನ್ನು ಉಳಿಸಿ ಬೆಳೆಸುವ ಕಡೆ ಗಮನ ಹರಿಸಬೇಕು ಎಂದು ಅಧಿಕಾರಿ ಕಿವಿಮಾತು ಹೇಳಿದರು. ದಯಾನಂದ ಪೈ ಅವರು ಶಾಲೆ ಸ್ಥಾಪನೆ ಆದಲ್ಲಿಂದ ಇಲ್ಲಿಯವರೆಗಿನ ಬೆಳವಣಿಗೆಗಳನ್ನು ವಿವರಿಸಿದರು ವಿದ್ಯಾರ್ಥಿಗಳಿಗೆ ಹಲವು ರೀತಿಯ ಪ್ರೋತ್ಸಾಹಕ ಗಳನ್ನು ನೀಡುವ ಬಗ್ಗೆ ದಾನಿಗಳ ಸಹಕಾರ ಪಡೆದು ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯ ಶಿಕ್ಷಕರು ಮಾಹಿತಿ ನೀಡಿದರು.

ಪ್ರಭಾರ ಮುಖ್ಯ ಶಿಕ್ಷಕ ಪ್ರಸನ್ನ ವಿ. ಶೆಣೈ ಸಹ ಶಿಕ್ಷಕ ರಾಬರ್ಟ್ ಡಿಸೋಜಾ ವಂದಿಸಿದರು ವಿದ್ಯಾರ್ಥಿಗಳನ್ನು ಹೂ ನೀಡುವುದರ ಮೂಲಕ ಆರತಿ ಬೆಳಗಿ ಸಿಹಿ ತಿಂಡಿ ಹಂಚಿ ಮಧ್ಯಾಹ್ನದ ಅಕ್ಷರ ದಾಸೋಹದೊಂದಿಗೆ ಪಾಯಸ ದೂಟವನ್ನು ನೀಡಲಾಗಿತ್ತು ಗೌರವ ಶಿಕ್ಷಕಿ ಪ್ರತಿಭಾ ಮತ್ತು ಸ್ವಯಂಸೇವಕ ಪ್ರಜ್ವಲ್ ಅಕ್ಷರ ದಾಸೋಹ ಸಿಬ್ಬಂದಿ ಕಸ್ತೂರಿ ಮತ್ತು ಪೋಷಕರು ಹಾಜರಿದ್ದರು.

LEAVE A REPLY

Please enter your comment!
Please enter your name here