Tuesday, January 14, 2025
Homeಬೆಂಗಳೂರುನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ವಿಧಿವಶ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾಳೆ ಬೆಳಿಗ್ಗೆ 8ಗಂಟೆಯವರೆಗೆ ಎಸ್.ಎಂ.ಕೃಷ್ಣ ಅವರ ಸದಾಶಿವ ನಗರ ನಿವಾಸದಲ್ಲಿಯೇ ಅವರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಳೆ ಬೆಳಿಗ್ಗೆ 10 ಗಂಟೆಗೆ ಅವರ ಹುಟ್ಟೂರು ಮದ್ದೂರು ತಾಲೂಕಿನ ಸೋಮನಹಳ್ಳಿಗೆ ಪಾರ್ಥಿವ ಶರೀರ ಕೊಂಡೊಯ್ಯಲಾಗುವುದು. ಅಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುವುದು ಎಂದರು.

ಮೂರುದಿನಗಳ ಕಾಲ ರಾಜ್ಯದಲ್ಲಿ ಯಾವುದೇ ಸರ್ಕಾರಿ ಹಾಗೂ ಮನರಂಜನಾ ಕಾರ್ಯಕ್ರಮ ನಡೆಯುವುದಿಲ್ಲ. ಇಂದಿನಿಂದ ಡಿಸೆಂಬರ್ 12ರವರೆಗೆ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಬುಧವಾರ ಸರಕಾರಿ ರಜೆ ಘೋಷಿಸಲಾಗಿದೆ. ಸಾಲ ಸರ್ಕಾರಿ ಗೌರವಗಳೊಂದಿಗೆ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಮಾಜಿ ಮುಖ್ಯಮಂತ್ರಿ ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ಇನ್ನಿಲ್ಲ

ಮಾಜಿ ಮುಖ್ಯಮಂತ್ರಿ, ಮುತ್ಸದ್ದಿ ರಾಜಕಾರಣಿ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗಿನ ಜಾವ ನಿಧನರಾದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. 

RELATED ARTICLES
- Advertisment -
Google search engine

Most Popular