ಬಾಲ ಗರ್ಭಿಣಿಯರ ವರದಿ ಸಲ್ಲಿಕೆ ಕಡ್ಡಾಯ : ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರ ಸೂಚನೆ

0
12

ಬೆಂಗಳೂರು : ಅಪ್ರಾಪ್ತ ವಯಸ್ಸಿನ ಯಾವುದೇ ಗರ್ಭಿಣಿ ಖಾಸಗಿ ಆಸ್ಪತ್ರೆಗೆ ದಾಖಲಾದಲ್ಲಿ ಸಂಬಂಧಿಸಿದ ವೈದ್ಯರು ಪೋಕ್ಸೊ ಕಾಯ್ದೆಯಡಿ ಕೂಡಲೇ ವಿಶೇಷ ಬಾಲ ನ್ಯಾಯ ಪೊಲೀಸ್ ಘಟಕ ಅಥವಾ ಪೊಲೀಸ್ ಠಾಣೆಗೆ ವರದಿ ಮಾಡುವುದು ಕಡ್ಡಾಯ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಅಪ್ರಾಪ್ತ ಗರ್ಭಿಣಿಯರ ಕುರಿತು ವರದಿ ಮಾಡದೆ ಚಿಕಿತ್ಸೆ ನೀಡಿದಲ್ಲಿ ಸಂಬಂಧಿಸಿದ ವೈದ್ಯರು ಮತ್ತು ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಪೋಕ್ಷೋ ಕಾಯ್ದೆ ಅನ್ವಯ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲ ಗರ್ಭಿಣಿ ಪ್ರಕರಣಗಳ ವಿವರವನ್ನು ಕಾನೂನು ಬದ್ಧವಾಗಿ ವರದಿ ಮಾಡಬೇಕಿದೆ. ಇಂತಹ ಪ್ರಕರಣ ದಾಖಲಾದ ಸಂದರ್ಭದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು. ಇದರಿಂದ ರಕ್ಷಣಾತ್ಮಕ ಮತ್ತು ಪುನರ್ವಸತಿ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಖಾಸಗಿ ಆಸ್ಪತ್ರೆಗಳು ಕೆಳಕಂಡ ಸೂಚನೆಗಳನ್ನು ಪಾಲಿಸಬೇಕು.

* POCSO ಪ್ರಕರಣದ ವಿವರಗಳನ್ನು ಸೂಕ್ತವಾಗಿ ದಾಖಲಿಸಬೇಕು.

* ವೈದ್ಯಕೀಯ ದಾಖಲೆಗಳನ್ನು ಕಾನೂನುಬದ್ದವಾಗಿ ಸಂಗ್ರಹಿಸಬೇಕು. ರೋಗಿಯ ಗೌಪ್ಯತೆಯನ್ನು ಕಾಪಾಡಬೇಕು.

* ತನಿಖಾ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು.

* ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ವೈದ್ಯರು ಮತ್ತು ಸಿಬ್ಬಂದಿಗೆ POCSO ಕಾಯಿದೆಯ ವಿಧಿ-ನಿಯಮಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಕ್ರಮ ಕೈಗೊಳ್ಳಬೇಕು.

ಇದು ತಕ್ಷಣದಿಂದಲೇ ಜಾರಿಯಾಗುತ್ತದೆ. ಮೇಲ್ಕಂಡ ಸೂಚನೆಗಳನ್ನು ಪಾಲಿಸದಿದ್ದಲ್ಲಿ ಸಂಬಂಧಿತ ಖಾಸಗಿ ಆಸ್ಪತ್ರೆ/ವೈದ್ಯರ ವಿರುದ್ಧ ಮಾರ್ಗಸೂಚಿಯು ಕಾನೂನುಬದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.

LEAVE A REPLY

Please enter your comment!
Please enter your name here