ದಿನಾಂಕ 09/12/2025 ರಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ತಿನ ಕಲಾಪದಲ್ಲಿ ವಿಧಾನ ಪರಿಷತ್ತಿನ ಶಾಸಕ ಐವನ್ ಡಿ ಸೋಜಾರವರ ಪ್ರಶ್ನೆಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ಎಂ.ಬಿ. ಪಾಟೀಲ್ ಉತ್ತರಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದ ವಿಸ್ತರಣೆಗೆ ಭೂಮಿಯನ್ನು ಸ್ವಾದೀನಪಡಿಸಿಕೊಳ್ಳುವ ಕಾರ್ಯ ಯಾವ ಹಂತದಲ್ಲಿದೆ ಈ ಬಗ್ಗೆ ಕೈಗೊಂಡಿರುವ ಕ್ರಮವೇನು? ಎಂಬ ಪ್ರಶ್ನೆಗೆ ಮಂಗಳೂರು ವಿಮಾನ ನಿಲ್ದಾಣದ ರನ್-ವೇ ಬೇಸಿಕ್ ಸ್ಟ್ರಿಪ್ ಮತ್ತು RESA (Runway End Safety Area) ವಿಸ್ತರಣೆಗಾಗಿ ಸುಮಾರು 36 ಎಕರೆ ಜಮೀನನ್ನು ಭೂಸ್ವಾದೀನ ವೆಚ್ಚವನ್ನು ಭರಿಸಿ ಕಾಮಗಾರಿಯನ್ನು ಕೈಗೊಳ್ಳಲು ಕ್ರಮ ವಹಿಸುವಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸಂಸ್ಥೆಯನ್ನು ಕೋರಲಾಗಿದೆ.
ಮಂಗಳೂರು ವಿಮಾನ ನಿಲ್ದಾಣದ ಕಾರ್ಯಚರಣೆ ಮತ್ತು ನಿರ್ವಹಣೆಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ AAI ಸಂಸ್ಥೆಯ ಮೂಲಕ PPP ಅಧಾರದ ಮೇಲೆ ಖಾಸಗಿ ಸಂಸ್ಥೆಗೆ ವಹಿಸಲಾಗುತ್ತದೆ. ಈ ವಿಮಾನ ನಿಲ್ದಾಣವು AAI ವ್ಯಾಪ್ತಿಗೆ ವ್ಯಾಪ್ತಿಗೆ ಒಳಪಡುವುದರಿಂದ ರನ್-ವೇ ವಿಸ್ತರಣೆಗೆ ಕ್ರಮವಹಿಸಲು ಆ ಸಂಸ್ಥೆಯನ್ನು ಕೋರಲಾಗಿದೆ ಎಂದು ಸಚಿವರು ಉತ್ತರಿಸಿದ್ದಾರೆ.
