ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿ – ಮಕ್ಕಳ ಮತ್ತು ಮಹಿಳಾ ಸುರಕ್ಷತಾ ಕಾರ್ಯಕ್ರಮ

0
9

ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪಿನಂಗಡಿಯಲ್ಲಿ ದಿನಾಂಕ 18-08-2026 ನೇ ಮಂಗಳವಾರದಂದು ಮಕ್ಕಳಾ ಮತ್ತು ಮಹಿಳಾ ಸುರಕ್ಷತಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಪ್ಪಿನಂಗಡಿಯ ಪೊಲೀಸ್ ಅಧಿಕಾರಿ ಸುತೇಶ್ ಕೆ. ಪಿ ರವರು ಪೋಕ್ಸೋ ಕಾಯ್ದೆ ಒಳಗೊಂಡಿರುವ ಶಿಕ್ಷೆ, ಮಾನಸಿಕ,ದೈಹಿಕ ಹಿಂಸೆ,ಸೈಬರ್ ಕ್ರೈಂ, ಅಂತೆಯೇ ಎಚ್ಚರಿಕೆಯಿಂದ ಮೊಬೈಲ್ ಬಳಕೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿಯನ್ನು ನೀಡಿದರು.

ಡ್ರಗ್ಸ್ ಬಳಕೆಯಿಂದ ಎದುರಾಗುವ ತೊಂದರೆಗಳು, ಮೊಬೈಲ್ ಬಳಕೆ ಯಿಂದಾಗುವ ಅನಾಹುತಗಳ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅಕ್ಕ ಪಡೆ ಯ ಸಿಬ್ಬಂಧಿ ಸುಖಿತಾ ಶೆಟ್ಟಿ ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ಮಾಹಿತಿಯನ್ನು ನೀಡಿದರು.

ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಅಜೀಜ್ ಬಸ್ತಿಕರ್ ಕಾರ್ಯಕ್ರಮದ ಕುರಿತು ಅಧ್ಯಕ್ಷೀಯ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ರೇಖಾ.ಎಂ ಉಪ್ಪಿನಂಗಡಿ ಪೊಲೀಸ್ ಠಾಣೆ, ಭವ್ಯ ಅಕ್ಕ ಪಡೆ ಸಿಬ್ಬಂಧಿ ಪುತ್ತೂರು ಮಹಿಳಾ ಪೊಲೀಸ್ ಠಾಣೆ,ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲರಾದ ಇಬ್ರಾಹಿಂ ಎಂ ಕಾರ್ಯಕ್ರಮಕ್ಕೆ ಎಲ್ಲರನ್ನು ಸ್ವಾಗತಿಸಿ,ವಾಣಿಜ್ಯ ಶಾಸ್ತ್ರ ಉಪನ್ಯಾಸಕಿಯಾದ ಕುಮಾರಿ ನವ್ಯಶ್ರೀ ವಂದಿಸುವುದರ ಜೊತೆಗೆ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.