Sunday, July 21, 2024
Homeರಾಜಕೀಯಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಇದರ ವಿವೇಕ ಕೊಠಡಿ - ಶಾಸಕ ಗುರ್ಮೆ ಸುರೇಶ್...

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಇದರ ವಿವೇಕ ಕೊಠಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಣ್ಣಂಪಳ್ಳಿ ಇದರ ವಿವೇಕ ಕೊಠಡಿ ನಿರ್ಮಾಣಕ್ಕೆ ರೂ.13.9 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಇಂದು ದಿನಾಂಕ 13-06-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಸಚಿನ್ ಪೂಜಾರಿ, ಶಾಲಾ ಸಂಸ್ಥಾಪಕರಾದ ಪ್ರಶಾಂತ್ ಹೆಗ್ಡೆ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಚಂದ್ರ ಪುತ್ರನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬ್ರಹ್ಮಾವರ ವಲಯ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಪಿ ಸುನಿಲ್ ಹಾಗೂ ಸಹ ಶಿಕ್ಷಕರು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular