ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಹಳೆ ವಿದ್ಯಾರ್ಥಿ ಸಂಘ ರಾಗಿಹಕ್ಲು ಇದರ ಶಾಲಾ ವಾರ್ಷಿಕೋತ್ಸವ ಮತ್ತು ಸಭಾಂಗಣ ಉದ್ಘಾಟನೆ ಕಾರ್ಯಕ್ರಮ ಸಂಭ್ರಮದಲ್ಲಿ ನಡೆಯಿತು.
ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ
ಹಳೆ ವಿದ್ಯಾರ್ಥಿಗಳು ನಿರ್ಮಿಸಿದ ಸಭಾಭವನ ಉದ್ಘಾಟಿಸಿ ಮಾತನಾಡಿ
ಪ್ರತಿಯೊಂದು ಶಾಲೆಯು ಉನ್ನತ ಮಟ್ಟ ಬೆಳೆಯ ಬೇಕಾದರೆ ಆ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸುತ್ತಾರೆ ಹಾಗೆ ನಿಮ್ಮೂರಿನಲ್ಲಿ ಒಂದು ಅದ್ಭುತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೀರಿ, ಬೈಂದೂರು ವಲಯದಲ್ಲಿ ಒಂದು ಯಶಸ್ವಿ ಕಾರ್ಯಕ್ರಮವಾಗಿ ಮೂಡಿ ಬಂದಿದೆ ಎಂದರು.
ಧನಸಹಾಯ ನೀಡಿದ ದಾನಿಗಳಿಗೆ ಮತ್ತು ಈ ಹಿಂದೆ ಈ ಶಾಲೆಯಲ್ಲಿ ಸೇವೆ ಸಲ್ಲಿಸಿದ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು..
ಕಲಿಕೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ರವೀಂದ್ರ ಪೂಜಾರಿ ಮತ್ತು ತಂಡ ಮಕ್ಕಳಿಗೆ ಪ್ರೋತ್ಸಾಹ ಧನವನ್ನು ನೀಡಿ ಗೌರವಿಸಿದರು.
ಶಾಲೆಯ ವಿದ್ಯಾರ್ಥಿಗಳಿಗೆ ಮತ್ತು ಹಳೆ ವಿದ್ಯಾರ್ಥಿಗಳಿಗೆ ಶಾಲೆಯ ವಾರ್ಷಿಕೋತ್ಸವ ಅಂಗವಾಗಿ ವಿವಿಧ ಸಾಂಸ್ಕೃತಿ ಮತ್ತು ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ವಿಜೇತರಿಗೆ ಬಹುಮಾನ ವಿತರಿಸಿದರು.
ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀನಿವಾಸ್ ಪೂಜಾರಿ ಅವರು ಮಾತನಾಡಿ ಈ ಶಾಲೆಯ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ಕಾರ್ಯಕ್ರಮ ಜರಗಿದೆ ಹಾಗೆ ಉತ್ತಮ ಶಿಕ್ಷಕರು ಈ ಶಾಲೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ ಮುಂದಿನ ದಿನಗಳಲ್ಲಿ ವಾಹನ ವ್ಯವಸ್ಥೆ ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸಲು ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ ಎಂದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಮೇಶ್ ಪೂಜಾರಿ ಅವರು ಮಾತನಾಡಿ ಸುಮಾರು 15 ಲಕ್ಷದ ವೆಚ್ಚದಲ್ಲಿ ಸಭಾಭವನವನ್ನು ನಿರ್ಮಿಸಿದ್ದೇವೆ ಇದಕ್ಕೆ ಸಹಕರಿಸಿದ ಪ್ರತಿಯೊಬ್ಬರಿಗೂ ಕೂಡ ಧನ್ಯವಾದ ಸಮರ್ಪಿಸಿದರು ಶಾಲಾ ಮುಖ್ಯೋಪಾಧ್ಯಾಯರಾದ ಸಂಜು ಗೌಡ. ಕೆ ಅವರು ಮಾತನಾಡಿ ಇಷ್ಟೊಂದು ಅದ್ದೂರಿಯಾಗಿ ಕಾರ್ಯಕ್ರಮ ನಿರ್ವಹಿಸಲು ಸಹಕರಿಸಿದ ಪ್ರತಿಯೊಬ್ಬರಿಗೂ ವಂದದನೆಯನ್ನು ಸಮರ್ಪಿಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷರಾದ ರವಿ ಪೂಜಾರಿ ಅವರು ಮಾತನಾಡಿ ಪೋಷಕರು ಹೆಚ್ಚಿನ ಸಂಖ್ಯೆ ಮುಂದಿನ ದಿನಗಳಲ್ಲಿ ಈ ಶಾಲೆಗೆ ವಿದ್ಯಾರ್ಥಿಗಳನ್ನು ಸೇರಿಸಿ ಎಂದರು.
ಶಾಲಾ ವಿದ್ಯಾರ್ಥಿಗಳಿಂದ ಮತ್ತು ಅಂಗನವಾಡಿ ಪುಟಾಣಿಗಳಿಂದ ಮತ್ತು ಹಳೆ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಮನೋರಂಜನ ಕಾರ್ಯಕ್ರಮವು ನಡೆಯಿತು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಮಹೇಂದ್ರ ಪೂಜಾರಿ,ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ನಾಯ್ಕ, ಪ್ರಾಥಮಿಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶೇಖರ್ ಪೂಜಾರಿ, ಪ್ರದೀಪ್ ಶೆಟ್ಟಿ, ನಾಗರಾಜ್ ಬಿಡುವಾಳರು, ಶರತ್ ಗಾಣಿಗ ವಿದ್ಯಾರ್ಥಿ ನಾಯಕಿ ನಾಗಶ್ರೀ ಎಸ್ ಡಿ ಎಂ ಸಿ ಸರ್ವ ಸದಸ್ಯರು ,ಅಧ್ಯಾಪಕ ವೃಂದ ,ಗೌರವ ಶಿಕ್ಷಕರು ಅಡುಗೆ ಸಿಬ್ಬಂದಿಗಳು ,ವಿದ್ಯಾರ್ಥಿಗಳು ,ಹಳೆ ವಿದ್ಯಾರ್ಥಿ ವೃಂದ, ಪೋಷಕ ವೃಂದ ಮತ್ತು ಶಾಲಾ ವಿದ್ಯಾ ಅಭಿಮಾನಿಗಳು ಉಪಸ್ಥಿತರಿದ್ದರು.
ಅಧ್ಯಾಪಕರಾದ ಶಶಿಧರ್ ಶೆಟ್ಟಿ ಕಾರ್ಯಕ್ರಮವನ್ನು ಸ್ವಾಗತಿಸಿ, ನಿರೂಪಿಸಿದರು. ಪ್ರಾಧ್ಯಾಪಕರಾದ ಜೆಪಿ ವಂದಿಸಿದರು.