ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

0
35

2025 -26ರ ಶೈಕ್ಷಣಿಕ ಸಾಲಿನ ಪುಂಜಾಲಕಟ್ಟೆ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾಕಾರಂಜಿ ಸ್ಪರ್ಧೆಗಳು ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಇಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಹರೀಶ್ ಆರಿಕೋಡಿ ಧರ್ಮದರ್ಶಿಗಳು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಆರಿಕೋಡಿ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾದ ಮಹಾಬಲ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ದಿನೇಶ್ ಖಂಡಿಗ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೇಶವ ಅಂಗಡಿ ಮಜಲು, ಮುಖಂಡರಾದ ಹರೀಶ್ ಗೌಡ ಪರಪ್ಪಾಜೆ, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಬಸವಲಿಂಗಪ್ಪ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಜಯ, ಶಿಕ್ಷಣ ಸಂಯೋಜಕರಾದ ಸಿದ್ದಲಿಂಗ ಸ್ವಾಮಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ವೇದಿಕೆಯಲ್ಲಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಮೋಹನ ಸಿಆರ್ ಪಿಗಳಾದ ರಾಜೇಶ, ಮೊಹಮ್ಮದ್ ಶರೀಫ್, ಚೇತನಾ ಉಪಸ್ಥಿತರಿದ್ದರು.

ಪ್ರತಿಭಾ ಕಾರಂಜಿ ತಾಲೂಕು ನೋಡಲ ಅಧಿಕಾರಿ ಚೇತನಾಕ್ಷಿ ಪ್ರಸ್ತಾವನೆಗೈದರು. ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ಕೆ. ಸ್ವಾಗತಿಸಿದರು. ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಾಲಾ ಶಿಕ್ಷಕ ವಿಜಯಕುಮಾರ್ ಇವರನ್ನು ಸನ್ಮಾನಿಸಲಾಯಿತು. ಸಹ ಶಿಕ್ಷಕಿ ಮೇಧ ಸನ್ಮಾನ ಪತ್ರ ವಾಚಿಸಿದರು. ಶಿಕ್ಷಕ ಮಹೇಶ್ ಬೆಳಾಲು ನಿರೂಪಿಸಿದ ಕಾರ್ಯಕ್ರಮದಲ್ಲಿ ವಿಜಯಕುಮಾರ್ ವಂದನಾರ್ಪಣೆಗೈದರು.

ಸುಮಾರು 16 ವೈಯಕ್ತಿಕ ಹಾಗೂ 3 ಸಾಮೂಹಿಕ ವಿಭಾಗದ ಸ್ಪರ್ಧೆಗಳು ನಡೆದವು. ಶಾಲೆಯ ನಿರಂತರ ನೂರು ಶೇಕಡ ಫಲಿತಾಂಶ ಸಾಧನೆಗೆ ಶಾಲಾ ಶಿಕ್ಷಕ ವೃಂದವನ್ನು ಆರಿಕೋಡಿ ಕ್ಷೇತ್ರದ ವತಿಯಿಂದ ಧರ್ಮದರ್ಶಿಗಳು ಸನ್ಮಾನಿಸಿ ಹಾರೈಸಿದರು. ಪ್ರತಿಭಾ ಕಾರಂಜಿ ಸ್ಪರ್ಧೆಯ ವಿಜೇತರುಗಳಿಗೆ ಅರಿಕೋಡಿ ಕ್ಷೇತ್ರದ ವತಿಯಿಂದ ಬಹುಮಾನಗಳನ್ನು ಹಾಗೂ ಇಲಾಖೆಯಿಂದ ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದ ಯಶಸ್ಸಿಗೆ ಶಾಲಾ ಎಸ್‌ಡಿಎಂಸಿ, ಪೋಷಕವೃಂದ, ಹಿರಿಯ ವಿದ್ಯಾರ್ಥಿ ಸಂಘ, ಊರ ದಾನಿಗಳು, ಸಂಘ ಸಂಸ್ಥೆಗಳು ಸಹಕಾರ ನೀಡಿದರು. ಪ್ರಮುಖರಾದ ಡೀಕಯ್ಯ ಗೌಡ ಕಂಚರೊಟ್ಟು, ಹೊನ್ನಪ್ಪ ಗೌಡ ಸೋಣಕುಮೇರು, ಜಯಶ್ರೀ ಮೋಹನಗೌಡ ಕಾಡಂಡ ಶುಭ ಹಾರೈಸಿದರು.

LEAVE A REPLY

Please enter your comment!
Please enter your name here