ಬಂಟ್ವಾಳ : ಉತ್ತಮ ಆರೋಗ್ಯಕ್ಕೆ ಅತ್ಯುತ್ತಮ ಆಹಾರ ಸೇವನೆಯ ಅವಶ್ಯಕತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಸರಕಾರವು ಪೋಷಣಾ ಅಭಿಯಾನವನ್ನು ಜಾರಿಗೊಳಿಸಿದೆ. ಆ ಪ್ರಯುಕ್ತವಾಗಿ ಬಂಟ್ವಾಳ ತಾಲೂಕಿನ ನೆಟ್ಲಮುಡ್ನೂರು ಗ್ರಾಮದ ದ. ಕ. ಜಿ. ಪಂ. ಕಿ. ಪ್ರಾ. ಶಾಲೆ ಏಮಾಜೆಯಲ್ಲಿ ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶ ಭರಿತ ಆಹಾರವನ್ನು ನೀಡುವ ಸಲುವಾಗಿ ಪ್ರತೀ ತಿಂಗಳು “ಅಕ್ಷಯ ಪಾತ್ರೆ ” ಕಾರ್ಯಕ್ರಮ ಆಯೋಜಿಸಲಾಗುತಿದ್ಫು 2025-26 ನೇ ಸಾಲಿನ “ಅಕ್ಷಯ ಪಾತ್ರೆ” ಕಾರ್ಯಕ್ರಮವನ್ನು ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸಮಿತಾ. ಡಿ. ಪೂಜಾರಿ . ಕಳಸೆಗೆ ಅಕ್ಕಿ ಹಾಕುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆಯಿತ್ತರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಅತಿಥಿಗಳು, ಮಕ್ಕಳ ಪೋಷಕರು, ಶಾಲ ವಿದ್ಯಾರ್ಥಿಗಳು, ಅಕ್ಷಯ ಪಾತ್ರೆಗೆ ಬಿಸಿ ಊಟಕ್ಕೆ ಬೇಕಾದ ತರಕಾರಿ ಇನ್ನಿತರ ಸಾಮಾಗ್ರಿಗಳನ್ನು ತುಂಬಿಸಿದರು.
ಈ ಸಂದರ್ಭದಲ್ಲಿ ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಮಲ್ಲಿಕಾ ಗಣೇಶ್ ಆಚಾರ್ಯ, ಪಂಚಾಯತ್ ಸದಸ್ಯರುಗಳಾದ ಶಕೀಲಾ ಕೃಷ್ಣ ಮಿತ್ತ ಕೋಡಿ, ಧನಂಜಯ ಗೌಡ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಹರೀಶ್ ಕುಲಾಲ್, ನಿಕಟ ಪೂರ್ವ ಉಪಾಧ್ಯಕ್ಷರಾದ ಪ್ರಸಾದ್ ಆಚಾರ್ಯ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರಗಳು, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು.