Monday, May 19, 2025
Homeನಿಧನಗ್ರಾ. ಪಂ. ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆ

ಗ್ರಾ. ಪಂ. ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆ

ಉಪ್ಪಿನಂಗಡಿ: ಇಲ್ಲಿನ ಗ್ರಾಮ ಪಂಚಾಯತಿಯೊಂದರ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೈದ ಘಟನೆ ವರದಿಯಾಗಿದೆ. ಬಾರ್ಯ ಗ್ರಾಮ ಪಂಚಾಯತ್ ಸಿಬ್ಬಂದಿ, ಇದೇ ಗ್ರಾಮದ ಪೆರಿಯೊಟ್ಟು ನಿವಾಸಿ ಗಣೇಶ್ ಯಾನೆ ಕುಶಾಲಪ್ಪ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 19 ವರ್ಷಗಳಿಂದ ಬಾರ್ಯ ಪಂಚಾಯತ್ ಸಿಬ್ಬಂದಿಯಾಗಿರುವ 38ರ ಹರೆಯದ ಗಣೇಶ್ ಏ.22ರಂದು ಮನೆ ಬಳಿ ವಿಷ ಸೇವಿಸಿ ಅಸ್ವಸ್ಥರಾಗಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಏ.23ರಂದು ಕೊನೆಯುಸಿರೆಳೆದಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular