Saturday, June 14, 2025
Homeಹಾಸನಹೃದಯಾಘಾತದಿಂದ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಮೃತ್ಯು

ಹೃದಯಾಘಾತದಿಂದ ಕುಸಿದು ಬಿದ್ದು ಪದವಿ ವಿದ್ಯಾರ್ಥಿನಿ ಮೃತ್ಯು

ಬಿ.ಕಾಂ ವಿದ್ಯಾರ್ಥಿನಿಯೊಬ್ಬಳು ಎದೆನೋವಿನಿಂದ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕವನ ಕೆವಿ (21) ಮೃತ ವಿದ್ಯಾರ್ಥಿನಿ. ಪಾಪಣ್ಣ ಹಾಗೂ ಗಾಯತ್ರಿ ದಂಪತಿಯ ಮಗಳು.

ಹಾಸನ ನಗರದ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿದ್ದ ಕವನಳಿಗೆ ನಿನ್ನೆ ಸಂಜೆ ಮನೆಗೆ ಬಂದಾಗ ತೀವ್ರ ಎದೆನೋವು ಕಾಣಿಸಿ ಕೊಂಡಿದ್ದು, ಕುಡಿಯಲು ನೀರು ಕೊಡುವಂತೆ ಕೇಳಿದ್ದಾಳೆ. ನೀರು ತರುವಷ್ಟರಲ್ಲಿ ಏಕಾಏಕಿ ಕುಸಿದು ಬಿದ್ದ ಕವನಳನ್ನು ಪೋಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ ಆಸ್ಪತ್ರೆಗೆ ಬರುವಷ್ಟರಲ್ಲೇ ಆಕೆ ಕೊನೆಯುಸಿರೆಳೆದಿದ್ದಳು.

ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular