ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರಧಾನ: ವಿದ್ಯಾರ್ಥಿಗಳಿಗೆ ರೋಚಕ ಪ್ರೇರಣೆ ಮತ್ತು ಪದಕ ಪುರಸ್ಕಾರ

0
28

ಕಾರ್ಕಳ: ಸ್ವಜನಶೀಲತೆ ದೀರ್ಘಕಾಲಿಕ ಬಾಂಧವ್ಯ ಮತ್ತು ಅರ್ಥಪೂರ್ಣ ಸಂಬಂಧಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕೆಂದು 99 ಗೇಮ್ಸ್, ರೋಬೋ ಸಾಫ್ಟ್ ಸಂಸ್ಥೆಗಳ ಸ್ಥಾಪಕ ರೋಹಿತ್ ಭಟ್ ತಿಳಿಸಿದ್ದಾರೆ.
ಶನಿವಾರ ನಿಟ್ಟೆ ಮಹಾಲಿಂಗ ಅಡ್ಯಾನ್ ತಯಾ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 2,025 ನೇ ಆವೃತ್ತಿಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಜೀವನ ವು ದೀರ್ಘಕಾಲಿಕ ಮ್ಯಾರಥಾನ್ ಆಗಿದ್ದು 100 ಮೀಟರ್ ನ ಓಟವಲ್ಲ ಎಂಬುದನ್ನು ನಾವು ಅರ್ಥ ಮಾಡಿಕೊಳ್ಳಬೇಕು.
ನಿರಂತರ ಪ್ರಯತ್ನ ಮತ್ತು ಉದ್ದೇಶ ಪೂರ್ವಕ ಜೀವನದಿಂದ ಪ್ರೇರಿತವಾದ ದೀರ್ಘಕಾಲಿಕ ಗುರಿಗಳತ್ತ ಗಮನಹರಿಸುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಮಾಜಿ ಪ್ರಾಂಶುಪಾಲ ಹಾಗೂ ಗವರ್ನಿಂಗ್ ಕೌನ್ಸಿಲ್ ನ ಸದಸ್ಯ ಗೌರವಅತಿಥಿಯಾಗಿ ಭಾಗವಹಿಸಿದ್ದ ನಿಟ್ಟೆ ಪರಿಗಣಿತ ವಿವಿಯ ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾಕ್ಟರ್ ಗೋಪಾಲ ಮೊಗೇರಾಯ ಮಾತನಾಡಿದರು.
ನಿಟ್ಟೆ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ ನಿಟ್ಟೆ ಪರಿ ಗಣಿತ ವಿವಿ ಕುಲಾಧಿಪತಿ ಏನ್ ವಿನಯ ಹೆಗಡೆ ಅಧ್ಯಕ್ಷತೆ ವಹಿಸಿ ಮಾತನಾಡಿರು. ವಿಟಿಯು ಸ್ಕೀಮ್ ಪರೀಕ್ಷೆ ನಿಯಂತ್ರಕ ಡಾಕ್ಟರ್ ಶ್ರೀನಿವಾಸ್ ರಾವ್ ಬಿ ಆರ್ ಪದವಿ ಪ್ರಧಾನ ಸಮಾರಂಭದ ಮೆರವಣಿಗೆಯನ್ನು ಮುನ್ನಡೆಸಿದರು.
ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ ಚಿನ್ನ ಮತ್ತು ಬೆಳ್ಳಿಯ ಪದಕ ನೀಡಿ ಗೌರವಿಸಲಾಯಿತು. 2025ನೇ ಸಾಲಿನಲ್ಲಿ ಬಿ ಈ ಪದವೀಧರರಾದ ಆರ್ಟಿಫಿಶಿಯಲ್ ಇಂಟೆಲಿಜೆನ್ಸಿ ಮತ್ತು ಮಿಷನ್ ಲರ್ನಿಂಗ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿ ಎಸ್ ಸಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಯಿತು.
ವೇದಿಕೆಯಲ್ಲಿ ನಿಟ್ಟೆ ಪರಿಗಣಿಸಲ್ಪಟ್ಟ ವಿವಿಯ ಆಫ್ ಕ್ಯಾಂಪಸ್ ಸೆಂಟರ್ ನ ಕ್ಯಾಂಪಸ್ ಮೆಂಟೇನೆನ್ಸ್ ಡೆವಲಪ್ ಮೆಂಟ್ ನಿರ್ದೇಶಕ ಯೋಗೀಶ್ ಹೆಗಡೆ
ಕರಿಕುಲಂ ಡೆವಲಪ್ಮೆಂಟ್ ವಿಭಾಗದ ನಿರ್ದೇಶಕ ಡಾಕ್ಟರ್ ಕೆ ರಾಜೇಶ್ ಶೆಟ್ಟಿ ನಿಟ್ಟಿ ತಾಂತ್ರಿಕ ಕಾಲೇಜಿನ ಉಪ ಪ್ರಾಂಶುಪಾಲ ಡಾಕ್ಟರ್ ನಾಗೇಶ್ ಪ್ರಭು , ಆಫ್ ಕ್ಯಾಂಪೇಸಿನ ಉಪಕುಲ ಸಚಿವೆ ಡಾ. ರೇಖಾ ಭಂಡಾರ್ಕರ್, ನಿಟ್ಟೆ ತಾಂತ್ರಿಕ ಕಾಲೇಜಿನ ಇಂಡಸ್ಟ್ರಿ ಇನ್ಸ್ಟಿಟ್ಯೂಟ್ ಇಂಟರಾಕ್ಷನ್ ನಿರ್ದೇಶಕ ಡಾಕ್ಟರ್ ಪರಮೇಶ್ವರ ರೆಸಿಡೆಂಟ್ ಇಂಜಿನಿಯರ್ ಡಾಕ್ಟರ್ ಶ್ರೀನಾಥ್ ಶೆಟ್ಟಿ ಮತ್ತು ಇತರರು ಉಪಸ್ಥಿತರಿದ್ದರು.
ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್ ಜಿಪ್ಲೊಂಕರ್ ಅತಿಥಿಗಳನ್ನು ಪರಿಚಯಿಸಿ ಸ್ವಾಗತಿಸಿದರು ಡೀನ್ ಅಕಾಡೆಮಿಕ್ಸ್ ಡಾಕ್ಟರ್ ಐಆರ್ ಮಿತ್ತಂತಾಯ ಚಿನ್ನ ಹಾಗೂ ಬೆಳ್ಳಿಯ ಪದಕ ಗಳಿಸಿದ ವಿದ್ಯಾರ್ಥಿಗಳ ಹೆಸರುಗಳನ್ನು ವಾಚಿಸಿದರು.
ಡೀನ್ ಡಾಕ್ಟರ್ ನರಸಿಂಹ ಬೈಲಕೇರಿ ಕಾರ್ಯಕ್ರಮ ಸಂಯೋಜಿಸಿದರು ಸಹಾಯಕ ಪರೀಕ್ಷಾ ನಿಯಂತ್ರಕ ಡಾಕ್ಟರ್ ವೆಂಕಟೇಶ್ ಕಾಮತ್ ವಂದಿಸಿದರು. ಎಲೆಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾಕ್ಟರ್ ಅನುಷಾ ಆರ್ ಶರತ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here