ಬೈಂದೂರು: ಗ್ರಾಮ ಪಂಚಾಯತ್ ಕಾರ್ಯಾಲಯ ಕಿರಿಮಂಜೇಶ್ವರ ಬೈಂದೂರು ತಾಲೂಕು, ಉಡುಪಿ ಜಿಲ್ಲೆ
ಇಂದು ಗ್ರಾಮ ಸಭೆ ನೆಡೆಯಿತು.
2024-25 ನೇ ಸಾಲಿನ ಪ್ರಥಮ ಸುತ್ತಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನ ಗ್ರಾಮ ಸಭೆಯನ್ನು ಮಹಾಲಸ ಕಲ್ಚರಲ್ ಹಾಲ್ ನಾಗೂರು ಇಲ್ಲಿ ಇಂದು ನಡೆಸಲಾಯಿತು.
ಗ್ರಾಮ ಪಂಚಾಯಿತ್ ಅಧ್ಯಕ್ಷರಾದ ಶೇಖರ್ ಖಾರ್ವಿಯವರ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ
ಗ್ರಾಮಸ್ಥರ ಹವಾಲನ್ನು ಸ್ವೀಕರಿಸಿ ಗ್ರಾಮ ಪಂಚಾಯತ್ ವತಿಯಿಂದ ಆಗುವಂತಹ ಅಭಿವೃದ್ಧಿ ಕಾರ್ಯದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿ ಇಲಾಖೆ ಮಾಹಿತಿ ನೀಡಿದರು ಅಧಿಕಾರಿಗಳು ಹಾಗೂ ಸಾರ್ವಜನಿಕರು ಹಲವಾರು ವಿಷಯಗಳ ಬಗ್ಗೆ ಉತ್ತಮವಾದ ಚರ್ಚೆ ನಡೆಯಿತು.
ಗ್ರಾಮಸ್ಥರು ಸಭೆಯಲ್ಲಿ ಗ್ರಾಮದ ಕುಂದು ಕೊರತೆಯನ್ನು ಚರ್ಚಿಸಿದರು ಅಧಿಕಾರಿಗಳು ಸಲಹೆ ಸೂಚನೆಯನ್ನು ನೀಡಿದರು ಹಿರಿಯರ ಸಲಹೆ ಸೂಚನೆಯಂತೆ ಒಂದು ಉತ್ತಮ ರೀತಿಯ ಮಾದರಿ ಗ್ರಾಮ ಸಭೆಯಾಗಿ ಇಂದು ನಡೆಯಿತು ಎಂದು ಹೇಳಿದರು.
ಈ ಸಂದರ್ಭದಲ್ಲಿ
ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯತ್ ಸರ್ವ ಸದಸ್ಯರು, ತೋಟಗಾರಿಕೆ ಇಲಾಖೆ,ಮೀನುಗಾರಿಕೆ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ,ಬಂದರು ಇಲಾಖೆ,ಅರಣ್ಯ ಇಲಾಖೆ,ಆರೋಗ್ಯ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಐಆರ್‌ಬಿ ಇಲಾಖೆ, ಗ್ರಾಮ ಆಡಳಿತ ಅಧಿಕಾರಿ, ಮೆಸ್ಕಾಂ,
ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಸಂಘದ ಸದಸ್ಯರು, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸ್ವಾಗತ ಕೋರಿದರು. ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಕಾರ್ಯಕ್ರಮ ನಿರೂಪಿಸಿದರು.