ಪರ್ಕಳ : ಜೆಸಿಐ ಪರ್ಕಳ ಘಟಕದ ವತಿಯಿಂದ ಆಯೋಜಿಸಲಾದ ಭವ್ಯ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಪರ್ಕಳ ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ಭಕ್ತಿಭಾವಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ನೆರವೇರಿತು.
ಪೂಜಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ಸಂಕಲ್ಪ ನೆರವೇರಿಸಿದರು. ಪೂಜೆಯ ನಂತರ ಭಕ್ತಾದಿಗಳಿಗೆ ಮಹಾ ಅನ್ನಸಂತರ್ಪಣೆ ಏರ್ಪಡಿಸಲಾಗಿದ್ದು, ಸುಮಾರು 1500ಕ್ಕೂ ಅಧಿಕ ಜನರು ಪ್ರಸಾದವನ್ನು ಸ್ವೀಕರಿಸಿದರು.
ಕಾರ್ಯಕ್ರಮದ ಯಶಸ್ಸಿಗೆ ಜೆಸಿಐ ಪರ್ಕಳದ ಅಧ್ಯಕ್ಷರಾದ Jc HGF ಭರತ್ ಕೆ ಕುಲಾಲ್ ಅವರ ನೇತೃತ್ವದಲ್ಲಿ ಎಲ್ಲಾ ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಸಕ್ರಿಯವಾಗಿ ಶ್ರಮವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾರ್ಯಕ್ರಮಕ್ಕೆ ಜೆಸಿಐ ಭಾರತ ವಲಯ 15ರ ನಾಯಕ JFF ಸಂತೋಷ್ ಶೆಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಿ, ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅವರು ಮಾತನಾಡಿ, ಇಂತಹ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳು ಸಮಾಜದ ಒಗ್ಗಟ್ಟನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

