ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಸಂಭ್ರಮದ ವರಮಹಾಲಕ್ಷ್ಮಿ ವ್ರತ ಪೂಜೆ

0
22

ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಬೆಳ್ತಂಗಡಿ ತಾಲೂಕು ಲೋಕನಾಥೇಶ್ವರ ಭಜನಾ ಮಂಡಳಿ ಶ್ರೀದೇವಿ ಮಹಿಳಾ ಕೇಂದ್ರ ಇವುಗಳ ಜಂಟಿ ಆಶ್ರಯದಲ್ಲಿ ವರಮಹಾಲಕ್ಷ್ಮಿ ವ್ರತ ಪೂಜೆ ಕಾರ್ಯಕ್ರಮ ನಡೆಯಿತು .

ಅನೇಕ ಮಹಿಳೆಯರು ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಿ ದೇವರ ತೀರ್ಥ ಪ್ರಸಾದ ಸ್ವೀಕರಿಸಿದರು ಈ ಸಂದರ್ಭದಲ್ಲಿ ಆಡಳಿತದಾರರು ದೇವಸ್ಥಾನದ ಅರ್ಚಕರು ಭಜನಾ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಊರಿನ ಗ್ರಾಮಸ್ಥರು ಉಪಸ್ಥಿತಿ ಇದ್ದರು.