ಮಂಗಳೂರು : ಪ್ರಸಕ್ತ ಸಾಲಿನ ಮಂಗಳೂರು ಮಹಾನಗರ ಪಾಲಿಕೆಯ ಬಜೆಟ್ನಲ್ಲಿ ತುಳು ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಸಲುವಾಗಿ 50 ಲಕ್ಷ ರೂಪಾಯಿಗಳನ್ನು ವಿನಿಯೋಗಿಸಲು ಕಾದಿರಿಸಿರುವುದನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಸ್ವಾಗತಿಸಿರುತ್ತಾರೆ.
ನಗರಪಾಲಿಕೆಯ ಈ ನಿರ್ಧಾರಕ್ಕಾಗಿ ನಗರಪಾಲಿಕೆಯ ಆಡಳಿತಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಎಚ್. ವಿ.ದರ್ಶನ್ ಅವರನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಅಭಿನಂದಿಸಿರುತ್ತಾರೆ.
