ಶಾಸಕರ ಪ್ರದೇಶಾಭಿವೃದ್ಧಿ ಯೋಜನೆ ಮತ್ತು ವಿವೇಚನಾ ಅನುದಾನದಡಿ ತಾಲೂಕಿನ ವಿವಿಧ ದೇವಸ್ಥಾನಗಳ ಅಭಿವೃದ್ಧಿಗೆ ಮಹತ್ವದ ಅನುದಾನ ಮಂಜೂರು ಮಾಡಲಾಗಿದೆ. ಜನಪ್ರಿಯ ಶಾಸಕರಾದ Harish Poonja ಅವರು ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.
ತಾಲೂಕಿನ ಪ್ರಮುಖ ದೇವಸ್ಥಾನಗಳ ಅಭಿವೃದ್ಧಿಗೆ ಕೆಳಗಿನಂತೆ ಅನುದಾನ ಮಂಜೂರಾಗಿದೆ:
* ಗರ್ಡಾಡಿ ಗ್ರಾಮದ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹1.00 ಕೋಟಿ
* ಕರಾಯ ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ₹20 ಲಕ್ಷ
* ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅಭಿವೃದ್ಧಿಗೆ ₹10 ಲಕ್ಷ
* ಹತ್ಯಡ್ಕ ಗ್ರಾಮದ ನೆಕ್ಕರಡ್ಕ ಶ್ರೀ ವಿಠೋಬ ರುಕುಮಾಯಿ ದೇವಸ್ಥಾನಕ್ಕೆ ₹5 ಲಕ್ಷ
* ಬಳ್ಳಮಂಜದ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ₹10 ಲಕ್ಷ
ಚಿಬಿದ್ರೆ ಗ್ರಾಮದ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ₹5 ಲಕ್ಷ
* ಮಚ್ಚಿನ ಗ್ರಾಮದ ಮಾಣೂರು ಶ್ರೀ ಧರ್ಮಶಾಸ್ತಾವು ದೇವಸ್ಥಾನಕ್ಕೆ ₹10 ಲಕ್ಷ
ಈ ಅನುದಾನದಿಂದ ದೇವಸ್ಥಾನಗಳ ಮೂಲಸೌಕರ್ಯ ಅಭಿವೃದ್ಧಿ, ಭಕ್ತರ ಸೌಲಭ್ಯ ವೃದ್ಧಿ ಹಾಗೂ ಧಾರ್ಮಿಕ ಕೇಂದ್ರಗಳ ಸುಧಾರಣೆಗೆ ಸಹಕಾರಿಯಾಗಲಿದೆ. ಸ್ಥಳೀಯ ಭಕ್ತರು ಹಾಗೂ ಸಾರ್ವಜನಿಕರು ಶಾಸಕರ ಈ ಕ್ರಮವನ್ನು ಶ್ಲಾಘಿಸಿದ್ದಾರೆ.

