ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ : 15,000 ಹುದ್ದೆ ಭರ್ತಿ

0
48

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಶೀಘ್ರದಲ್ಲೇ ನೇಮಕಾತಿಗೆ ಸಂಬಂಧಿಸಿದ ಅಂತಿಮ ಅಧಿಸೂಚನೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸುವ ನಿರೀಕ್ಷೆಯಿದೆ.

ಒಟ್ಟು ಹುದ್ದೆಗಳಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ 6,967 ಹಾಗೂ ಕಲ್ಯಾಣೇತರ ಕರ್ನಾಟಕ ಭಾಗಕ್ಕೆ 8,033 ಹುದ್ದೆಗಳನ್ನು ಮೀಸಲಿಡಲಾಗಿದೆ. ಪದವೀಧರ ಪ್ರಾಥಮಿಕ ಶಿಕ್ಷಕರು (GPT), ಪ್ರೌಢಶಾಲಾ ಶಿಕ್ಷಕರು (AM), ಪ್ರಾಥಮಿಕ ಶಾಲಾ ಶಿಕ್ಷಕರು (PST), ದೈಹಿಕ ಶಿಕ್ಷಣ ಶಿಕ್ಷಕರು (PET) ಹಾಗೂ ಕಂಪ್ಯೂಟರ್ ಸೈನ್ಸ್ ಶಿಕ್ಷಕರ ಹುದ್ದೆಗಳು ನೇಮಕಾತಿಯಲ್ಲಿ ಒಳಗೊಂಡಿವೆ.

ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕವೇ ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಕೆ ಲಿಂಕ್‌ಗಳನ್ನು ಪರಿಶೀಲಿಸಬೇಕು. ಅಂತಿಮ ಅಧಿಸೂಚನೆ ಪ್ರಕಟವಾದ ಬಳಿಕವಷ್ಟೇ ಅರ್ಜಿ ಸಲ್ಲಿಕೆಯ ದಿನಾಂಕ, ಶುಲ್ಕ, ವಿಷಯವಾರು ಹುದ್ದೆಗಳ ಸಂಖ್ಯೆ ಹಾಗೂ ಅಗತ್ಯ ದಾಖಲೆಗಳ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ.

ವಯೋಮಿತಿ: ಸಾಮಾನ್ಯವಾಗಿ 21ರಿಂದ 40 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಸರ್ಕಾರದ ನಿಯಮದಂತೆ ವಿವಿಧ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆಯ ಅಂಕಗಳಿಗೆ 85%, ಪದವಿ ವಿದ್ಯಾರ್ಹತೆಗೆ 13% ಹಾಗೂ ಬಿ.ಎಡ್/ವೃತ್ತಿಪರ ಕೋರ್ಸ್‌ಗೆ 2% ಅಂಕಗಳ ವೈಟೇಜ್ ನೀಡಿ ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

ನೇಮಕಾತಿಯ ಅಂತಿಮ ಅಧಿಸೂಚನೆ ಹೊರಬಂದ ಬಳಿಕ ಅಭ್ಯರ್ಥಿಗಳು ವಿದ್ಯಾರ್ಹತೆ, ವಿಷಯವಾರು ಅರ್ಹತೆ, ಮೀಸಲಾತಿ, ಪರೀಕ್ಷಾ ಮಾದರಿ ಮತ್ತು ಅರ್ಜಿ ಸಲ್ಲಿಕೆ ದಿನಾಂಕಗಳನ್ನು ಕಡ್ಡಾಯವಾಗಿ ಪರಿಶೀಲಿಸಿ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here