ಬೆಂಗಳೂರು : ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಕರ್ನಾಟಕದ ಯುವಕ-ಯುವತಿಯರಿಗೆ ಉತ್ತಮ ಅವಕಾಶ ದೊರೆತಿದೆ. ಕರ್ನಾಟಕ ಲೋಕಾಯುಕ್ತ ಇಲಾಖೆ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಈ ನೇಮಕಾತಿ ಪ್ರಕ್ರಿಯೆಯಡಿ ಕ್ಲರ್ಕ್ (Clerk) ಮತ್ತು ಟೈಪಿಸ್ಟ್ (Typist) ಸೇರಿ ಒಟ್ಟು 26 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.
ಲಿಖಿತ ಪರೀಕ್ಷೆಯಿಲ್ಲದೆ ನೇರ ಆಯ್ಕೆ
ಈ ನೇಮಕಾತಿಯ ವಿಶೇಷತೆ ಎಂದರೆ ಲಿಖಿತ ಪರೀಕ್ಷೆ ಇರುವುದಿಲ್ಲ. ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ (Direct Interview) ಮೂಲಕ ಆಯ್ಕೆ ಮಾಡಲಾಗುತ್ತದೆ. ಪರೀಕ್ಷೆಯ ಒತ್ತಡವಿಲ್ಲದೆ ಸರ್ಕಾರಿ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶವಾಗಿದೆ.
ವೇತನ ವಿವರ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹34,100 ರಿಂದ ₹67,600 ವರೆಗೆ ವೇತನ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ
- ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ದ್ವಿತೀಯ ಪಿಯುಸಿ (2nd PUC) ಅಥವಾ ತತ್ಸಮಾನ ವಿದ್ಯಾರ್ಹತೆ ಕಡ್ಡಾಯ.
ವಯೋಮಿತಿ
- ಕನಿಷ್ಠ ವಯಸ್ಸು: 18 ವರ್ಷ
- ಗರಿಷ್ಠ ವಯಸ್ಸು: 40 ವರ್ಷ
- ಸರ್ಕಾರದ ನಿಯಮಾನುಸಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ.
ಪ್ರಮುಖ ದಿನಾಂಕ
- ಅರ್ಜಿ ಸಲ್ಲಿಕೆ ಆರಂಭ: ಈಗಾಗಲೇ ಆರಂಭವಾಗಿದೆ.
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 17, 2026
ಕೊನೆಯ ದಿನಗಳಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ, ಅಭ್ಯರ್ಥಿಗಳು ಮುಂಚಿತವಾಗಿಯೇ ಅರ್ಜಿ ಸಲ್ಲಿಸುವಂತೆ ಇಲಾಖೆ ಸಲಹೆ ನೀಡಿದೆ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಕರ್ನಾಟಕ ಲೋಕಾಯುಕ್ತ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆ, ಅರ್ಹತೆ, ಅಗತ್ಯ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿ ಸಲ್ಲಿಕೆ ಕುರಿತ ಸಂಪೂರ್ಣ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದು.

