ಮೂಡುಬಿದಿರೆ : ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ವತಿಯಿಂದ ನಾಳೆ (ಜೂನ್ 7) ಬೆಳ್ಳಗೆ 10-೦೦ಗಂಟೆಗೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ‘ಗೃಹಲಕ್ಷ್ಮಿ ಕೋಟಿ ಸಂಭ್ರಮ’ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗಾಗಿ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಭಾಗವಹಿಸುವ ಪ್ರತಿಯೊಬ್ಬ ಮಹಿಳೆಗೆ ಉಚಿತ ಲಕ್ಕಿಡಿಪ್ ಕೂಪನ್ ವಿತರಿಸಲಾಗುತ್ತದೆ. ಲಕ್ಕಿಡಿಪ್‌ನಲ್ಲಿ ಆಯ್ಕೆಯಾಗುವ 10 ಮಂದಿ ಗೃಹಲಕ್ಷ್ಮಿಯರಿಗೆ ಆಕರ್ಷಕ ಸೀರೆ ಬಹುಮಾನ ನೀಡಲಾಗುವುದು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಭರತ್ ಮುಂಡೋಡಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮಂಜುನಾಥ ಭಂಡಾರಿ, ಮಿಥುನ್ ರೈ, ಪದ್ಮರಾಜ್ ಪೂಜಾರಿ, ಸುಚರಿತ ಶೆಟ್ಟಿ ಹಾಗೂ ಪ್ರವೀಣ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಗೃಹಲಕ್ಷ್ಮಿಯರು ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

