ಗುಂಡಿಬೈಲ್ ಶನೀಶ್ವರ ಕ್ಷೇತ್ರ : ವಾರ್ಷಿಕೋತ್ಸವದ ಪೂರ್ವಭಾವಿ ಸಭೆ

0
31

ಗುಂಡಿಬೈಲ್ ಶನೀಶ್ವರ ಕ್ಷೇತ್ರದ ಈ ವರ್ಷದ ವಾರ್ಷಿಕೋತ್ಸವದ ಪೂರ್ವಭಾವಿ ಸಭೆ ದಿನಾಂಕ 25-01-2026 ಭಾನುವಾರ ಬೆಳಿಗ್ಗೆ 9.30ಕ್ಕೆ ಕ್ಷೇತ್ರದ ಆಡಳಿತ ಮಂಡಳಿ ಸದಸ್ಯರ ಉಪಸ್ಥಿತಿಯಲ್ಲಿ ಸರಿಯಾಗಿ ಜರಗಿತು.

ಸಭೆಯು ಆಡಳಿತ ಮಂಡಳಿ ಅಧ್ಯಕ್ಷರಾದ ಶೇಖರ್ ಜತ್ತನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ವಾರ್ಷಿಕೋತ್ಸವವನ್ನು ಯಶಸ್ವಿಯಾಗಿ ನಡೆಸುವ ಕುರಿತು ಆಡಳಿತ ಮಂಡಳಿ ಸದಸ್ಯರು ಹಲವು ಮಹತ್ವದ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ವಾರ್ಷಿಕೋತ್ಸವದ ವ್ಯವಸ್ಥೆ, ಧಾರ್ಮಿಕ ಕಾರ್ಯಕ್ರಮಗಳು, ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಕ್ಷೇತ್ರದ ಅಭಿವೃದ್ಧಿ ಹಾಗೂ ಸಂಪ್ರದಾಯಬದ್ಧವಾಗಿ ಕಾರ್ಯಕ್ರಮ ನಡೆಸುವ ಬಗ್ಗೆ ಒತ್ತು ನೀಡಲಾಯಿತು. ಸಭೆಯಲ್ಲಿ ಆಡಳಿತ ಮಂಡಳಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

ವರದಿ : ವಿನೋದ್ ಶೆಟ್ಟಿ, ಉಡುಪಿ

LEAVE A REPLY

Please enter your comment!
Please enter your name here