ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಅಖಿಲ ಭಾರತೀಯ ಶೆಕ್ಷಣಿಕ ಮಹಾಸಂಘದ ಂಃಖಒS ರಾಷ್ಟ್ರೀಯ ಸಹಸಂಘಟನಾ ಕಾರ್ಯದರ್ಶಿ ಗುಂಟ ಲಕ್ಷ್ಮಣ್ ಜೀ ಭೇಟಿ

0
92

ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿಗೆ ಅಖಿಲ ಭಾರತೀಯ ಶೆಕ್ಷಣಿಕ ಮಹಾಸಂಘದ ರಾಷ್ಟೀಯ ಸಹಸಂಘಟನಾ ಕಾರ್ಯದರ್ಶಿ ಗುಂಟ ಲಕ್ಷ್ಮಣ್ ಜೀ ಭೇಟಿ ನೀಡಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ. ಇವರನ್ನು ಸ್ವಾಗತಿಸಿ, ವಿವೇಕಾನಂದ ವಿದ್ಯಾವರ್ಧಕ ಸಂಘದ ಹಿನ್ನಲೆ ಹಾಗೂ ಅದರ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯ ಸಹಕಾರ್ಯದರ್ಶಿ ಮಾಧವ ಎಂ. ಕೆ., ಮಂಗಳೂರು ವಿಶ್ವವಿದ್ಯಾಲಯದ ಉಪನ್ಯಾಸಕ ಯಶವಂತ್ ಜೊತೆಗಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರೊಂದಿಗೆ ಗುಂಟ ಲಕ್ಷ್ಮಣ್ ಜೀ ಸಂವಾದ ನಡೆಸಿದರು ಹಾಗೂ ಸಂಘಟನೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ನರೇಂದ್ರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕರಾದ ಸಂತೋಷ್ ಬೋನಂತಾಯ, ವಿವೇಕಾನಂದ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಶೋಭಿತಾ ಸತೀಶ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ, ಉಪಪ್ರಾಂಶುಪಾಲರಾದ ದೇವಿಚರಣ್ ರೈ, ನರೇಂದ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶಾನುಭೋಗ್ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here